ಬೆಂಗಳೂರು: ರಾಜ್ಯಕ್ಕೆ ಬೆಳಕು ನೀಡುವ ಕೆಪಿಟಿಸಿಎಲ್ ನಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ ಕಮೀಷ್ ಪಡೆಯುತ್ತಿರುವ ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಗುತ್ತಿಗೆದಾರರ ಹಿತ ರಕ್ಷಣೆ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ, ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರು ಕಾವೇರಿ ಭವನದ ಕೆಪಿಟಿಸಿಎಲ್ ಮುಂಭಾಗ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ತದನಂತರ ಕೆಪಿಟಿಸಿಎಲ್ ನಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ದಾಖಲೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಸಾಮಾಜಿಕ ಮತ್ತು ಅರ್.ಟಿ.ಐ ಕಾರ್ಯಕರ್ತ ಶ್ರೀನಾಥ್ ಅವರು, ಕೆಪಿಟಿಸಿಎಲ್ ಹಣಕಾಸು ವಿಭಾಗದ ಅಧಿಕಾರಿ ಬಿ. ಕಪೂರ ಲಿಂಗಯ್ಯ, ಹಣಕಾಸು ಅಧಿಕಾರಿಗಳು, ವ್ಯವಸ್ಥಾಪಕ ನಿರ್ದೇಶಕರು ಮತ್ತಿತರರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಹಿರಿತನವನ್ನು ಪರಿಪಾಲನೆ ಮಾಡದೇ ಶೇ 1 ರಿಂದ 2.5 ರಷ್ಟು ಗುತ್ತಿಗೆದಾರರಿಗೆ ಕಮೀಷನ್ ಪಡೆದು ಅರ್ಹರಿಗೆ ಅನ್ಯಾಯ ಮಾಡುತ್ತಿದ್ದಾರೆ. ನಿಜವಾಗಿ ಕೆಲಸ ಮಾಡಿದ ಗುತ್ತಿಗೆದಾರರ ಬಿಲ್ಲನ್ನು ತಡೆಹಿಡಿದು ಅಧಿಕಾರ ದುರುಪಯೋಗ ಮಾಡಿಕೊಂಡು ಬಿಲ್ಲಿನ ಕಡತಗಳನ್ನು ತಿರುಚುತ್ತಿದ್ದಾರೆ. ಬಿ.ಆರ್ ಸಂಖ್ಯೆ ಮತ್ತು ಬಿಲ್ ಇನ್ ವರ್ಡ್ ಸಂಖ್ಯೆಯನ್ನು ಪಾರದರ್ಶಕವಾಗಿ ಪಾಲಿಸದೇ ದಾಖಲೆಗಳನ್ನು ತಮಗೆ ಬೇಕಾದ ಹಾಗೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಮಾಹಿತಿ ಹಕ್ಕು ಅಧಿ ನಿಯಮದಡಿ ಮಾಹಿತಿ ನೀಡಲು ಸಹ ಇವರು ಅಡ್ಡಿಪಡಿಸುತ್ತಿದ್ದಾರೆ. ಇಂತಹ ಅಧಿಕಾರಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿಯಿಂದ ಇಲಾಖಾ ತನಿಖೆ ಮಾಡಬೇಕು. ಭ್ರಷ್ಟ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.
ಬಿ ವಿ ಎಸ್ ರಾಜ್ಯಾಧ್ಯಕ್ಷ ಹರಿರಾಮ್ ಮಾತನಾಡಿ, ಕೆಪಿಟಿಸಿಎಲ್ ನಲ್ಲಿ ನಡೆದಿರುವ ಬಹುಕೋಟಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ಸಹ ಶಾಮಿಲಾಗಿದ್ದಾರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶ ನೀಡಬೇಕು, ಬಿಜೆಪಿಯ ಆಡಳಿತದ ಅವಧಿಯಲ್ಲಿ ಸಹ ಭ್ರಷ್ಟಾಚಾರ ನಡೆದಿದೆ, ಇವೆಲ್ಲದರ ಬಗ್ಗೆ ಸೂಕ್ತ ತನಿಖೆ ಆಗಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ಬಿಬಿ ಭಾಸ್ಕರ್ ಪ್ರಸಾದ್ ಮಾತನಾಡಿ, ಮಾಹಿತಿ ಹಕ್ಕು ನಿಯಮದ ಅಡಿ ಸಾರ್ವಜನಿಕ ಹಿತ ಶಕ್ತಿಯಿಂದ ಬರುವ ಎಲ್ಲಾ ಅರ್ಜಿಗಳಿಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಾದ ನರಸಿಂಹ ಭಟ್ ಹಾಗೂ ಪ್ರಥಮ ಮೇಲ್ಭಾಗ ಪ್ರಾಧಿಕಾರ ಮಧುಸೂದನ್ ಅವರಿಗೆ ಬೆದರಿಸಿ ಯಾವುದೇ ಮಾಹಿತಿ ನೀಡದಂತೆ ತಾಕಿದ್ದು ಮಾಡಿ ಒಳಪಂಚ ರೂಪಿಸಿ ಯಾವುದೇ ಅರ್ಜುನ ಪೂರಕ ದಾಖಲೆಗಳನ್ನು ಒದಗಿಸಿದ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿತ್ತು. ಎಲ್ಲಾ ದೂರಗಳನ್ನು ಸಹ ಕಸದ ಬುಟ್ಟಿಗೆ ಎಸೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು. ರಾಜರು ಸಮಾಜಕ್ಕೆ ಕಮಿಷನ್ ಹಣ ಪಡೆಯುತ್ತಾ ಸರ್ಕಾರ ಮತ್ತು ಸಾರ್ವಜನಿಕರ ಹಣವನ್ನು ಹಿಂಬಾಗಿಲ ಮೂಲಕ ಸಾವಿರಾರು ಕೋಟಿ ಹಣವನ್ನು ಲೂಟಿ ಮಾಡುತ್ತಾರೆ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಪ್ರಕರಣ ಸಂಬಂಧ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಬೇಕು, ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಇದೇ ವೇಳೆ ಒತ್ತಾಯ ಮಾಡಿದರು.
ಬಿವಿಎಸ್ ರಾಜ್ಯಾಧ್ಯಕ್ಷ ಹರಿರಾಮ್, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯದ್ಯಕ್ಷ ಬಿ ಆರ್ ಭಾಸ್ಕರ್ ಪ್ರಸಾದ್, ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟ ಸಂಚಾಲಕ ಸಮಿತಿ ಅಧ್ಯಕ್ಷ ದಲಿತ್ ರಮೇಶ್, ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಶಂಕರ್ ರಾಮಲಿಂಗಯ್ಯ, ಸಿದ್ದಾಪುರ ಮಂಜುನಾಥ್ ರಾಜ್ಯಾಧ್ಯಕ್ಷರು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನ ವೇದಿಕೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.