ಬೆಂಗಳೂರು: ಡಾ. ಸಿಎನ್ ಮಂಜುನಾಥ್ ಅವರ ಅಧಿಕಾರ ಅವಧಿ ಜನವರಿ 31 ರಂದು ಮುಕ್ತಾಯವಾದ ಹಿನ್ನೆಲೆ ಜಯದೇವ ರುದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರನ್ನಾಗಿ ಡಾ. ಕೆ ಎಸ್ ರವೀಂದ್ರನಾಥ್ ಅವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ. ಸಿಎನ್ ಮಂಜುನಾಥ್ ಅವರು ಕಳೆದ 18 ವರ್ಷಗಳಿಂದ ಜಯದೇವ ಆಸ್ಪತ್ರೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು, ನಾಲ್ಕು ಬಾರಿ ಅವರ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಯಿತು. ಜನವರಿ 31ರಂದು ಅವರ ಸೇವಾವಧಿ ಮುಕ್ತಾಯವಾಗಿದೆ..
ಡಾಕ್ಟರ್ ಕೆ ಎಸ್ ರವೀಂದ್ರನಾಥ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿದ್ದರು, ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದರು.