ಬೆಂಗಳೂರು: ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಸಿಬ್ಬಂದಿಗಳ, ನೌಕರರ ಸಮಸ್ಯೆಗಳಿಗೆ ಧ್ವನಿಯಾಗಿ ಅದರಲ್ಲೂ ಮಹಿಳಾ ನೌಕರರಿಗೆ ಸದ ಸಹಾಯಕ್ಕೆ ಮುಂದಾಗಿರುತ್ತೇನೆ ಎಂದು ಇಲಾಖೆಯ ಪ್ರಥಮ ದರ್ಜೆ ಸಹಾಯಕ ಎನ್ ಮಾಲತೇಶ್ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ಕಬ್ಬನ್ ಉದ್ಯಾನವನದ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ನಡೆಯಿತು, ಅದರಲ್ಲಿ ಭರ್ಜರಿ ಗೆಲುವು ಸಾಧಿಸಿ ಕುಶಿಯ ವಿಚಾರ ಹಂಚಿಕೊಂಡರು.
ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಒಟ್ಟು 88 ಮತದಾರರು ಇದ್ದರು, ಅದರಲ್ಲಿ 42 ಮತಗಳನ್ನು ಎನ್ ಮಾಲತೇಶ್ ಒಬ್ಬರೇ ಪಡೆಯುವ ಮೂಲಕ ಅಮೋಘ ಗೆಲುವನ್ನು ಸಾಧಿಸಿದ್ದಾರೆ ಹಾಲಿ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಮಾಲತೇಶ್ ಲೀಲಾಜಾಲವಾಗಿ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದೇವೆ ಎಂದರು. 5 ವರ್ಷಗಳ ಕಾಲ ಇಲಾಖೆಯ ನೌಕರರು,ಸಿಬ್ಬಂದಿ ವರ್ಗ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದಲ್ಲಿ ತಿಳಿಸಿ, ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದರು.
ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಪಡೆದಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ ಎನ್ ಮಾಲತೇಶ್ ಅವರಿಗೆ ಇಲಾಖೆಯ ಸಿಬ್ಬಂದಿ ವರ್ಗ, ಸಿಎಸ್ ಷಡಾಕ್ಷರಿ ಅವರು ಸನ್ಮಾನ ಮಾಡುವ ಮೂಲಕ ಶುಭಹಾರೈಸಿದರು.