ಬೆಂಗಳೂರು:ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಮಲ್ಲೇಶ್ವರಂ ವಿಭಾಗದ 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, 10ನೇ ಅಡ್ಡರಸ್ತೆ ಮಾರುಕಟ್ಟೆ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆ ನಡೆಸಲಾಯಿತು.
ಮಲ್ಲೇಶ್ವರಂನ Resident Welfare Association Malleshwaram Traders Associations ರವರ ಮನವಿಯ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ಹೊರಡಿಸಿರುವ ಆದೇಶದನುಸಾರ ಇಂದು ಬೆಳಗ್ಗೆ 11.30 ಘಂಟೆಯಿಂದ ಸಂಪಿಗೆ ರಸ್ತೆ, 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, 10ನೇ ಅಡ್ಡರಸ್ತೆ, ಮಾರುಕಟ್ಟೆ ರಸ್ತೆಗಳ ಪಾದಚಾರಿ ಮಾರ್ಗ ಒತ್ತುವರಿ ತರೆವು ಕಾರ್ಯಚರಣೆಯನ್ನು ನಡೆಸಲಾಗಿದೆ.
4 ಟ್ರ್ಯಾಕ್ಟರ್ ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿದ್ದ ಅನಧಿಕೃತ ಅಂಗಡಿ, ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವುಮಾಡಲಾಯಿತು.
ಕಾರ್ಯಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ಕೋರಲಾಗಿದ್ದರೂ, ಮೇಲ್ಕಾಣಿಸಿದ ರಸ್ತೆಗಳಲ್ಲಿ ಸುಮಾರು 1.50 ಕೀ.ಮೀ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಮತ್ತೊಮ್ಮೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರಿಗೆ ದಂಡ ವಿಧಿಸುವ ಜೊತೆಗೆ ಕಾನುನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿರುತ್ತದೆ.
ಈ ವೇಳೆ ಕಾರ್ಯಪಾಲಕ ಅಭಿಯಂತರರಾದ ಜಯಶಂಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹರ್ಷ ನಾಯ್ಕ್, ಆರೋಗ್ಯಾಧಿಕಾರಿಗಳು, ಪೋಲಿಸ್ ಅಧಿಕಾರಿಗಳು/ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮಾರ್ಷಲ್ಗಳು, ಪೌರಕಾಮೀಕರು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.