ಆಲೂರು/ಹಾಸನ :ಮರಸು ಹೊಸಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೈಡ್ ಮಕ್ಕಳು ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಸನ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಎಂಟೂ ತಾಲ್ಲೂಕುಗಳಿಂದ ಗೈಡ್ಸ್ ತಂಡಗಳು ಭಾಗವಹಿಸಿದ್ದುವು, ಅದರಲ್ಲಿ ಆಲೂರು ತಾಲ್ಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೈಡ್ಸ್ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ ಬಿ.ಎಚ್., ತಾಲ್ಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್.ಉಪ್ಪಾರ್, ಗೈಡ್ ನಾಯಕಿ ಎಸ್. ಎಸ್. ಸುನೀತಾ, ಲೇಡಿ ಸ್ಕೌಟ್ ಮಾಸ್ಟರ್ ಕಾವ್ಯ, ವಿಜೇತ ಮಕ್ಕಳಾದ ಕೃತಿಕ, ಭೂಮಿಕ, ಸ್ಪಂದನ, ವರ್ಷಿಣಿ, ರಕ್ಷಾ, ಚರಿತಶ್ರೀ, ಕುಮುದ ಹಾಗೂ ಚಿನ್ಮಯಿ ಇದ್ದರು.