ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಕೋದಂಡರಾಮಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಹನಿಯೂ ಮಕ್ಕಳಿಗೆ ಮುಂದಾಗುವ ತೊಂದರೆಗಳನ್ನು ಎದುರಿಸುತ್ತದೆ, ಹೀಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಬಿಬಿಎಂಪಿ ಆರೋಗ್ಯ ಕೇಂದ್ರ ಗಳಿಗೆ ಕರೆದುಕೊಂಡು, ಇಲ್ಲವೇ ನಿಮ್ಮ ಬದವನೆಯಲ್ಲಿಯೆ ಪ್ರತಿನಿಧಿಗಳು ಬಂದು ಲಸಿಕೆ ಹಾಕುತ್ತಾರೆ ತಪ್ಪದೆ ಹಾಕಿಸಿ ಎಂದು ರಿಲಿಂಹೇಳಿದರು.
ಭವಿಷ್ಯದಲ್ಲಿ ಯಾವುದೇ ರೀತಿಯ ಮಕ್ಕಳಿಗೆ ಆಗದಿರಲಿ ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇದರಲ್ಲಿ ಮೂಡನಂಬಿಕೆ ಬೇಡ, ವೈಜ್ಞಾನಿಕ ವಾಗಿ ಪಾಲಗೊಳ್ಳಿ ಎಂದು ತಿಳಿಸಿದರು.
ಅರೊಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶೇ.94ರಷ್ಟು ಪೋಲಿಯೋ ಲಸಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ದಿನ ಶೇ. 94.33 ರಷ್ಟು ಲಸಿಕೆ ಹಾಕಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮಕ್ಕಳ ಸಂಖ್ಯೆ(0-5)1113617 ಪೋಲಿಯೋ ಹನಿ ಹಾಕಿದ ಒಟ್ಟು ಸಂಖ್ಯೆ:- 1050348 ರಷ್ಟಿದೆ, ಶೇಕಡಾವಾರು:- 94.33% ಅನುಪಾತದಲ್ಲಿ ಇದೆ.