ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪೂರ್ವ ವಲಯದ ಶಿವಾಜಿನಗರ, ಹೆಬ್ಬಾಳ ಹಾಗೂ ಪುಲಕೇಶಿನಗರ, ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಆರ್.ಬಿ.ಎ.ಎನ್.ಎಂ.ಎಸ್. ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ”ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಪಾಲಿಕೆಯ “ಹಸಿರು ರಕ್ಷಕ”, “ಉದ್ಯಾನ ಮಿತ್ರ” ಹಾಗೂ “ಕೆರೆ ಮಿತ್ರ” ಎಂಬ ಮೂರು ವೆಬ್ ಲಿಂಕ್ ಗಳನ್ನು ಅನಾವರಣಗೊಳಿಸಿದರು.
ಈ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ಭೈರತಿ ಸುರೇಶ್, ಸ್ಥಳೀಯ ಶಾಸಕರಾದ ಶ್ರೀ ರಿಜ್ವಾನ್ ಹರ್ಷದ್, ಶ್ರೀ ಎಸಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ. ನಾಗರಾಜು, ಮಾಜಿ ರಾಜ್ಯಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.