ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಮಾಧ್ಯಮ ಹಾಗು ಕೆಳವರ್ಗದ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ದೃಷ್ಟಿಯಿಂದ ಚಿಕ್ಕಬಾಣವರ ವಿನಾಯಕ ನಗರದಲ್ಲಿ ಧನ್ವಂತರಿ ಸಮೂಹ ಸಂಸ್ಥೆಗಳಲ್ಲಿ ಒಂದಾದ ಧನ್ವಂತರಿ ಆಸ್ಪತ್ರೆಯನ್ನು ಪ್ರಾರಂಭಿಸಿ ಅದರಲ್ಲಿ ಧನ್ವಂತರಿ ಮೆಡಿಕಲ್ ಮಳಿಗೆ ಉದ್ಘಾಟನೆ ಮಾಡಲಾಗಿದೆ ಎಂದು ದಾಸರಹಳ್ಳಿ ಕ್ಷೇತ್ರದ ಶಾಸಕ ಎಸ್ ಮುನಿರಾಜು ತಿಳಿಸಿದರು.
ಧನ್ವಂತರಿ ಆಸ್ಪತ್ರೆಯಲ್ಲಿ ಮೆಡಿಕಲ್ ಶಾಪ ಉದ್ಘಾಟನೆ ಹಾಗು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಧನ್ವಂತರಿ ಸಂಸ್ಥೆಯಲ್ಲಿ ಸುಮಾರು 4 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಾರೆ,ಅದರಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಧನ್ವಂತರಿ ಆಸ್ಪತ್ರೆಯ ಸ್ಥಾಪಿಸಲಾಗಿದೆ, ಸಂಸ್ಥೆಯ ಸಂಸ್ಥಾಪಕರಾದ ಆರಿಫ್ ಅಹಮಾದ್ ಅವರ ಹುಟ್ಟುಹಬ್ಬದ ಹಿನ್ನೆಲೆ ಜನರಿಗೆ ಶಾಶ್ವತವಾದ ಅನುಕೂಲವನ್ನು ಮಾಡಿಕೊಡುವ ದೃಷ್ಟಿಯಿಂದ 50 ಹಾಸಿಗೆಗಳ ಸುಸರ್ಜಿತ ಆಸ್ಪತ್ರೆಯ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಸಾಮಾನ್ಯ ವಾರ್ಡ್, ಐಸಿಯು ವಾರ್ಡ್ ಸೌಲಭ್ಯ ಒದಗಿಸಲಾಗಿದೆ.
ಆಸ್ಪತ್ರೆಯಲ್ಲಿ ಮೆಡಿಕಲ್ ಶಾಪ್ ಉದ್ಘಾಟನೆ ಹಿನ್ನೆಲೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮಾಡಲಾಗಿದೆ, ಇದಲ್ಲದೆ ಉಚಿತವಾಗಿ ಕಣ್ಣಿನ ತಪಾಸಣೆ, ಅಗತ್ಯವಿದ್ದರೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ, ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಕೊಡುವ ದೃಷ್ಟಿಯಿಂದ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಕ್ಷೇತ್ರದ ಜನರ ದೂರ ದೃಷ್ಟಿಇಟ್ಟುಕೊಂಡು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಕೆಲಸವನ್ನು ಮಾಡಲಾಗುತ್ತದೆ.
ಇನ್ನು ಆಸ್ಪತ್ರೆಯಲ್ಲಿ ಅನುಭವಿ ಆಸ್ಪತ್ರೆ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಇದ್ದಾರೆ. ಮುಂದಿನ ದಿನಗಳಲ್ಲಿ 100 ಹಾಸಿಗೆಗಳನ್ನು ಮಾಡುವ ಗುರಿಯನ್ನು ಹೊಂದಲಾಗಿದೆ.
ಇನ್ನು ಇದೇ ವೇಳೆ ಧನ್ವಂತರಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಆರಿಫ್ ಅಹ್ಮದ್ ಮಾತನಾಡಿ, ದಾಸರಹಳ್ಳಿ ಕ್ಷೇತ್ರದ ಮಧ್ಯಮ, ಬಡವ, ಕೆಳವರ್ಗದವರಿಗೆ ಅನುಕೂಲವಾಗಲು ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಧನ್ವಂತರಿ ಔಷದಾಲಯ ಉಘಾತನೆ ಹಿನ್ನೆಲೆ ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಒದಗಿಸಲಾಗಿದೆ. 500 ಕ್ಕಿನಾಗ ಹೆಚ್ಚು ಕ್ಷೇತ್ರದ ಜನರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ದಾಸರಹಳ್ಳಿ ಕ್ಷೇತ್ರದಲ್ಲಿನ ಚಿಕ್ಕಬಾಣವರ, ಹೆಸರಘಟ್ಟ ಹೀಗೆ ಸುತ್ತಮುತ್ತಲಿನಲ್ಲಿ ಗುಣಮಟ್ಟದ, ಹೆಚ್ಚು ಸೌಲಭ್ಯ ಸಿಗದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಇಲ್ಲದ ಕಾರಣ, ತುರ್ತು ಚಿಕಿತ್ಸೆಗೆ ಹೆಣಗಾಡುವ ಪರಿಸ್ಥಿತಿ ಇರುವ ಹಿನ್ನೆಲೆ ಜನರಿಗೆ ಅನುಕೂಲವಾಗಲು ಆರೋಗ್ಯ ಸೇವೆ ಒದಗಿಸಲಾಗುತ್ತದೆ ಎಂದರು. ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣೆ ಮಾಡಿ ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಣೆ ಮಾಡಿದ್ದರು.
ನಮ್ಮ ತಂದೆಯ ಆಸೆಯಂತೆ ಸಮಾಜಕ್ಕೆ ಏನಾದರೂ ಸೇವೆ ಮಾಡುವ ದೃಷ್ಟಿಯಿಂದ ತಂದೆಯ ಆಸೆಯಂತೆ ಮಗನಾಗಿ ಕ್ಷೇತ್ರದ ಜನರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ನೀಡುವ ಕಾಯಕವನ್ನು ಮಾಡಿಕೊಂಡು ಬರುತ್ತಿದ್ದೇನೆ. ನಮ್ಮ ತಂದೆಯ ಬಯಕೆಯನ್ನು ಆರೋಗ್ಯ ಸೇವೆ ಮೂಲಕ ಈಡೇರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ, ಕ್ಷೇತ್ರದ ಜನರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.