ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರ ಪಟ್ಟಿಗೆ ನೋಂದಣಿ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರಿಗೆ ಅರ್ಜಿ ನಮೂನೆ 18 ನೀಡಿದರು.
ಬೆಂಗಳೂರು ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಡಾ. ಕೆ ಹರೀಶ್ ಕುಮಾರ್ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರಿಗೆ ಅರ್ಜಿ ನಮೂನೆ 18 ನೀಡಿದರು.
ಅರ್ಹ ಪದವೀಧರರೆಲ್ಲರೂ ತಪ್ಪದೇ ಮತಪಟ್ಟಿಯಲ್ಲಿ ಹೆಸರು ನೋಂದಾಯಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.