ಬೆಂಗಳೂರು:ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಪರಿಶೀಲಿಸಿ, ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿರುವುದರಿಂದ, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವುದರಿಂದ, ಒತ್ತುವರಿಯನ್ನು ತೆರವುಗೊಳಿಸುವಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿರುವುದರಿಂದ, ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿರುವವರನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮಳಿಗೆಗಳನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ಜಯನಗರ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಹಾಗೂ ಹೊರಗಿನ ಪ್ರದೇಶಗಳಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ವ್ಯಾಪಾರಸ್ಥರಿಂದಾಗಲಿ ಹಾಗೂ ಬೀದಿ ಬದಿಯ ವ್ಯಾಪಾರಿಗಳಿಂದಾಗಲಿ ಒತ್ತುವರಿಯಾಗದಂತೆ ಕ್ರಮವಹಿಸಲು ಗಸ್ತಿನಲ್ಲಿರುವ ಮಾರ್ಷಲ್ಗಳಿಗೆ ಸೂಚಿಸಲಾಯಿತು.
ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿ, ವಿದ್ಯುತ್ ದೀಪ ವ್ಯವಸ್ಥೆ ಇಲ್ಲದೇ ಇರುವುದನ್ನು ಗಮನಿಸಿ ಕೂಡಲೆ ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತವಾಗಿ ಒಳಬಾರದಂತೆ ಪ್ರವೇಶ ನಿರ್ಭಂದಗೊಳಿಸಲು ಕ್ರಮವಹಿಸಲುವ ಸೆ ಸೂಚಿಸಿದರು.
ಜಯನಗರ ವಾಣಿಜ್ಯ ಸಂಕೀರ್ಣದ ಬಳಿ ನಿರ್ಮಿಸಬೇಕಾಗಿರುವ ಬ್ಲಾಕ್-2, 3 & 4 ಕಟ್ಟಡದ ಸ್ಥಳವನ್ನು ಪರಿಶೀಲಿಸಿ, ಕಾಮಗಾರಿಯು ಪ್ರಾರಂಭವಾಗದೇ ಇರುವ ಹಿನ್ನಲೆಯಲ್ಲಿ ಬಿಡಿಎ ರವರೊಂದಿಗೆ ಸಮಾಲೋಚನೆ ಕೈಗೊಂಡು ವರದಿಯನ್ನು ಸಲ್ಲಿಸುವಂತೆÉ ಸೂಚಿಸಿದರು.
ಈ ವೇಳೆ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಮುಖ್ಯ ಅಭಿಯಂತರರಾದ ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.