ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಾಗರಿಕರಲ್ಲಿ ಹೆಚ್ಚು ಹರಿವು ಮೂಡಿಸಬೇಕೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೂರ್ವ ವಲಯ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋಗೆ ಸಂಬಂಧಿಸಿದಂತೆ ಪಿಯು ಬಿಲ್ಡಿಂಗ್ 10ನೇ ಮಹಡಿಯ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ್ 3 ರಿಂದ 6ನೇ 2024 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಪೂರ್ವ ವಲಯ ವ್ಯಾಪ್ತಿಯಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಲು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶ, ವಲಸಿಗರು ಹೆಚ್ಚಿಸುವ ಪ್ರದೇಶ, ಕಟ್ಟಡ ನಿರ್ಮಾಣ ಪ್ರದೇಶ, ಜನನಿಬಿಡ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಶಾಲೆಗಳು, ಅಂಗವಾಡಿ, ಶಿಶು ವಿಹಾರಗಳಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.
ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಿ:
ಪೋಲಿಯೊ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಸಲುವಾಗಿ ಪ್ರತಿನಿತ್ಯ ಮನೆಯಿಂದ ಮನೆಗೆ ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ ವಾಹನಗಳಲ್ಲಿ ಧ್ವನಿವರ್ಧಕ ಗಳ ಮೂಲಕ ಜಾಗೃತಿ ಮೂಡಿಸಲು ಸೂಚನೆ ನೀಡಿದರು.
ಸಭೆಯಲ್ಲಿ ವಲಯ ಜಂಟಿ ಆಯುಕ್ತರಾದ ಪಲ್ಲವಿ, ವಲಯ ಆರೋಗ್ಯಾಧಿಕಾರಿಯಾದ ಸವಿತಾ, ಆರೋಗ್ಯ ವೈದ್ಯಾಧಿಕಾರಿಗಳು, ಫನಾ, ಕ್ರಡೈ ಸೇರಿದಂತೆ ಇನ್ನಿತರರು ಹಾಜರಿದ್ದರು.