ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾಬೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲಿಕಾರಣ ಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಬುದ್ಧ ಜಯಂತಿ ಕಾಠ್ಯಕ್ರಮವನ್ನು ಸಚಿವ ತಂಗಡಗಿ ಉದ್ಘಾಟಿಸಿದರು. ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾಗಿರುವ ಅವಧಿಯಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿಯನ್ನು ಘೋಷಣೆ ಮಾಡಿ ಆಚರಣೆ ಮಾಡುತ್ತಿರುವುದು ನನ್ನ ಪಾಲಿನ ಅತ್ಯಂತ ಪುಣ್ಯದ ಕೆಲಸ ಎಂದು ಭಾವಿಸಿದ್ದೇನೆ. ಬುದ್ದ ಜಯಂತಿ ಆಚರಣೆಗೆ ಅನುಮತಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸುತ್ತಿರುವುದಾಗಿ ಹೇಳಿದರು. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಕಾಂಗ್ರೆಸ್ ಸರ್ಕಾರ ಜೈನ ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ದಿಗೆ 100 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಶಾಂತಿ ಸಂದೇಶ ಪ್ರಸ್ತುತ:
ಮನುಷ್ಯ ಮನುಷ್ಯರ ನಡುವೆ ದ್ವೇಷ ಅಸೂಯೆ ಬೆಳೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ತತ್ವಾದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತಿದೆ. ರಾಜರು ರಾಜರಾಗಿರಲು ಮಾತ್ರ ಬಯಸುತ್ತಾರೆ. ರಾಜತ್ಯದಿಂದ ಮನುಷ್ಯನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಜೀವನ ನಡೆಸುವುದು ಈ ಸಾಮಾನ್ಯ ಸಂಗತಿ ಭಗವಾನ ಬುದ್ಧರು ಅದನ್ನು ಮಾಡಿ ತೋರಿಸಿದರು. ಅವರ ಶಾಂತಿ ತನ್ನ ಇಂದುಎಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ ಎಂದರು.
ಬೌದ್ದ ಜಯಂತಿಯನ್ನು ಈ ವರ್ಷದಿಂದ ಸರ್ಕಾರ ದಿಂದ ಆಚರಿಸುವ ಸಂಪ್ರದಾಯ ಆರಂಭಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಭಗವಾನ್ ಬುಧನ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಶ್ರೀ ಭೋದಿದತ್ತ ಭಂತೇಶ್, ಬುದ್ಧದತ್ತ ಭಂತೇಜಿ, ಹಿರಿಯ ಸಾಹಿತಿ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಉಪಸ್ಥಿತರಿದ್ದರು.