LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಆರ್.ವಿ.ದೇವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು: ಎಂ.ಎಲ್.ಎ ಹಾಗೂ ಎಂ.ಎಲ್.ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ. ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಎಲ್‍ಎ ಹಾಗೂ ಎಂಎಲ್‍ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ. ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ.

ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜು ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ