LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಇ-ಆಸ್ತಿ ತ್ವರಿತ, ಸುಗಮ ವಿತರಣೆಗಾಗಿ ಕಂದಾಯ ವಿಭಾಗದ ಅಧಿಕಾರಿ ಮತ್ತು ನೌಕರರಿಗೆ ಕಾರ್ಯಗಾರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತುರ್ತಾಗಿ ಇ-ಖಾತಾ ಪಡೆಯಲು ಬರುವ ಆಸ್ತಿ ಮಾಲೀಕರಿಗೆ ಸರಿಯಾಗಿ ಸ್ಪಂದಿಸಬೇಕೆಂದು ಕಂದಾಯ ವಿಭಾಗದ ಜಂಟಿ ಆಯುಕ್ತೆಯಾದ ಲಕ್ಷ್ಮೀದೇವಿ ರವರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇ-ಖಾತಾ ನೀಡುವ ವಿಚಾರವಾಗಿ ನಗರದ ಎನ್.ಆರ್. ಕಾಲೋನಿಯ ಡಾ.ಸಿ ಅಶ್ವತ್ಥ್ ಕಲಾ ಭವನ ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಆಸ್ತಿ ಸೇವೆಗಳ ಸುಗಮ ವಿತರಣೆ ಹಾಗೂ ತುರ್ತು ಸಂದರ್ಭಗಳಲ್ಲಿ ನೋಂದಣಿ ಪ್ರಕರಣಗಳಿಗೆ ಆದ್ಯತೆಯನ್ನು ನೀಡಲು ತಿಳಿಸಿದರು.

ಬಿಬಿಎಂಪಿ‌ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳೊಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ತುರ್ತು ಆಸ್ತಿ ನೋಂದಣಿಗಾಗಿ ಅಂತಿಮ ಇ-ಖಾತಾವನ್ನು ಪಡೆಯುವ ಸಲುವಾಗಿ ಕಂದಾಯ ಅಧಿಕಾರಿಗಳ ಕಛೇರಿಗೆ ಬರುವ ನಾಗರೀಕರು/ಆಸ್ತಿ ಮಾಲೀಕರಿಗೆ ಕೂಡಲೆ ಸ್ಪಂದಿಸಿ ಇ-ಖಾತಾ ನೀಡುವ ವ್ಯವಸ್ಥೆ ಮಾಡಲು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿನ 21 ಲಕ್ಷಕಿಂತಲೂ ಹೆಚ್ಚು ಆಸ್ತಿಗಳನ್ನು ಡಿಜೀಟಲಿಕರಣಗೊಳಿಸಲಾಗಿದ್ದು, ದಿನಾಂಕ 1ನೇ ಅಕ್ಟೋಬರ್ 2024 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ವ್ಯವಸ್ಥೆಗೆ  ಒಳಪಡಿಸಿ bbmp.eaasthi.karnataka.gov.in ನಲ್ಲಿ ರಚಿಸಿ ಇರಿಸಲಾಗಿರುತ್ತದೆ ಎಂದರು.

ಇ-ಖಾತಾ ಪಡೆಯಲು ಹೆಲ್ಪ್ ಡೆಸ್ಕ್:

ಆಸ್ತಿ ನೊಂದಣಿ ಮಾಡಿಸುವವರಿಗೆ ಶೀಘ್ರವಾಗಿ ಇ-ಖಾತಾ ಪಡೆಯುವ ಸಲುವಾಗಿ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಗಳಲ್ಲಿ Help Desk ತೆರೆಯಲಾಗಿದ್ದು, ಈ ಮೂಲಕ ಶೀಘ್ರವಾಗಿ ಇ-ಖಾತಾ ಬಗ್ಗೆ ಅಗತ್ಯ ಮಾಹಿತಿ ಪಡದು ಇ-ಖಾತಾ ಪಡೆಯಬಹುದಾಗಿದೆ.

ತುರ್ತಾಗಿ ಆಸ್ತಿ ನೋಂದಣಿ ಮಾಡಿಸುವವರಿಗೆ ಹಾಗೂ ಅನಿವಾಸಿ ಭಾರತೀಯರಿಗೆ ಯಾವುದೇ ತೊಂದರೆ ಆಗದಂತೆ ಅತಿ ಶೀಘ್ರದಲ್ಲಿ ಇ-ಖಾತಾ ವಿತರಿಸುವ ಸಲುವಾಗಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್ ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ನೆರವಾಗುವಂತೆ ಸೂಚಿಸಿದರು.

8 ವಲಯಗಳ ಅಧಿಕಾರಿಗಳೊಂದಿಗೆ ಕಾರ್ಯಗಾರ:

ಇ-ಖಾತಾ ನೀಡುವ ವಿಚಾರವಾಗಿ ಪಾಲಿಕೆಯ ಎಂಟೂ ವಲಯಗಳಲ್ಲಿ ಬರುವ ಕಂದಾಯ ವಿಭಾಗದ ಉಪ ಆಯುಕ್ತರು, ಸಹಾಯಕ ಕಂದಾಯ ಅಧಿಕಾರಿಗಳು, ವಿಷಯ ನಿರ್ವಾಕರುಗಳು, ಎನ್.ಐ.ಸಿ ಅಧಿಕಾರಿಗಳು ಸೇರಿದಂತೆ 350ಕ್ಕೂ ಹೆಚ್ಚು ಅಧಿಕಾರಿ/ಸಿಬ್ಬಂದಿಗಳು ಕಾರ್ಯಗಾರದಲ್ಲಿದ್ದರು‌.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!