LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:  “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.“ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ” ಎಂದು ತಿಳಿಸಿದರು..

“ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು” ಎಂದು ಹೇಳಿದರು.

“ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ” ಎಂದರು.

“ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

ಗುಪ್ತಚರ ಇಲಾಖೆ ವೈಫಲ್ಯ ಇದೆ ಎಂದು ಭಾವಿಸುತ್ತೀರಾ ಎಂದು ಕೇಳಿದಾಗ, “ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ