LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 28 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ

ಬೆಂಗಳೂರು : ಸ್ವಚ್ಛ ಸರ್ವೇಕ್ಷಣ್ 2025-26 ಅಂಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 28 ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಸ್ಥಳ ಹಾಗೂ ಗುಟಕಾ/ ಪಾನ್ ಪರಾಗ್ ತಿಂದು ಉಗಿಯುವ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳಗಳ (Red Spot & Yellow Spot Cleaning) ಪೌರಕಾರ್ಮಿಕರಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಕೇಂದ್ರ ನಗರಪಾಲಿಕೆ ಆಯುಕ್ತ ದಲ್ಜಿತ್ ಕುಮಾರ್ ತಿಳಿಸಿದರು.



ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೂಪಿಸಲಾದ ಕಾರ್ಯ ಯೋಜನೆಯ (ಆಕ್ಷನ್ ಪ್ಲಾನ್) ಅನ್ವಯ 9 ನೇ ಭಾಗವಾಗಿ ಕೇಂದ್ರ ನಗರ ಪಾಲಿಕೆ  ವ್ಯಾಪ್ತಿಯಲ್ಲಿ *28 ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಸ್ಥಳ ಹಾಗೂ ಗುಟಕಾ/ ಪಾನ್ ಪರಾಗ್ ತಿಂದು ಉಗಿಯುವ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳ (Red Spot & Yellow Spot) ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ* ಹಾಗೂ ಸದರಿ ಸ್ಥಳಗಲ್ಲಿ ರಂಗೋಲಿ ಬಿಡಿಸಿ ಸುಂದರೀಕರಣಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಗುಟಕಾ ತಿಂದು ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದ್ದಾರೆ.


ಸ್ವಚ್ಛತಾ ಕಾರ್ಯದಲ್ಲಿ ಒಟ್ಟು 221 ಜನ ಪೌರಕಾರ್ಮಿಕರು ಹಾಗೂ ಇತರೆ ಸ್ವಚ್ಛತೆ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. *ಈ ಕಾರ್ಯಾಚರಣೆಯಲ್ಲಿ ಸುಮಾರು 7 ಕ್ವಿಂಟಾಲ್ ತ್ಯಾಜ್ಯವನ್ನು ಸಂಗ್ರಹಿಸಿ* ವಿಲೇವಾರಿ ಮಾಡಲಾಗಿದೆ.


*ಸಾರ್ವಜನಿಕರಲ್ಲಿ ವಿನಂತಿ* 


ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಗುಟಕಾ, ಪಾನ್ ಮಸಾಲಾ ತಿಂದು ಉಗಿಯದಂತೆ ಮನವಿ ಮಾಡಲಾಗಿದೆ.  ಅದಕ್ಕೆ ಸಂಬಂಧಿಸಿದಂತೆ ಅರುವಿನ ಜಾತವನ್ನು ಸಹ ಮಾಡಿ ಸಾರ್ವಜನಿಕರಿಗೆ ಪ್ರಜ್ಞೆಯನ್ನು ಮೂಡಿಸಲಾಯಿತು ಅಲ್ಲದೆ ಪೌರಕಾರ್ಮಿಕರು ಆ ಪ್ರದೇಶವನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ನೈರ್ಮಲೀಕರಣ ಮಾಡಿ ಸಾರ್ವಜನಿಕರಿಗೆ ತಿಳಿಸುವ ಪ್ರಯತ್ನವನ್ನು ಮಾಡಲಾಗಿದೆ.


ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಸಂಬಂಧಿತ ವಿಭಾಗದ ಎ.ಜಿ.ಎಂ ಗಳು ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇತರೆ ಸಿಬ್ಬಂದಿಗಳು ಭಾಗಿಯಾಗಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ