LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟಿ ವೃಕ್ಷ ಅಭಿಯಾನ: ಹಸಿರು ಹೊದಿಕೆ ಶೇ.0.17ರಿಂದ ಶೇ.2.4ಕ್ಕೆ ಏರಿಕೆ

ಬೆಂಗಳೂರು: ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ `ಕೋಟಿ ವೃಕ್ಷ ಅಭಿಯಾನ’ದಡಿ ಕಳೆದ 9 ವರ್ಷಗಳಲ್ಲಿ ಒಂದೂವರೆ ಕೋಟಿ ಸಸಿಗಳನ್ನು ನೆಡಲಾಗಿದೆ. 2030ರ ವೇಳೆಗೆ ಇನ್ನೂ 3.50 ಕೋಟಿ ಸಸಿಗಳನ್ನು ನೆಟ್ಟು, 5 ಕೋಟಿ ಸಸಿಗಳ ಗುರಿ ಸಾಧಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ *ವೃಕ್ಷೋಥಾನ್-2025* ಓಟದ ಪೋಸ್ಟರ್, ಟೀ ಶರ್ಟ್, ಮೆಡಲ್ ಬಿಡುಗಡೆ ಮಾಡಿದ ಅವರು ಈ ಉಪಕ್ರಮದ ಮೂಲಕ ಸಾಧಿಸಿರುವ ಸಂಗತಿಗಳ ಬಗ್ಗೆ ಮಾತನಾಡಿದರು.

2016ರಲ್ಲಿ ಜಿಲ್ಲೆಯಲ್ಲಿ ಕೇವಲ ಶೇಕಡ 0.17ರಷ್ಟು ಮಾತ್ರ ಅರಣ್ಯವಿತ್ತು. ಆಗ ಜಿಲ್ಲಾಡಳಿತ ಹಾಗೂ ಪಕ್ಷಾತೀತವಾಗಿ ಹಲವು ಸಂಘಸಂಸ್ಥೆಗಳು, ಬಿ.ಎಲ್.ಡಿ.ಇ. ಅಸೋಸಿಯೇಷನ್ ಮೂಲಕ ಕೋಟಿ ವೃಕ್ಷ ಅಭಿಯಾನ ರೂಪಿಸಲಾಯಿತು. ಹೀಗಾಗಿ ಈಗ ಜಿಲ್ಲೆಯಲ್ಲಿ ಹಸಿರು ಹೊದಿಕೆಯು ಶೇಕಡ 2.4ರಷ್ಟಕ್ಕೆ ವೃದ್ಧಿಸಿದೆ. ಜೊತೆಗೆ ಶುದ್ಧ ಗಾಳಿಯ ಗುಣಮಟ್ಟದಲ್ಲಿ ಇಡೀ ದೇಶದಲ್ಲಿ ವಿಜಯಪುರ ಜಿಲ್ಲೆಯು ತೃತೀಯ ಸ್ಥಾನದಲ್ಲಿದೆ. ಅಂರ್ತಜಲ ಮಟ್ಟ ವೃದ್ಧಿಸಿದ್ದು, ಮಣ್ಣಿನ ಸವಕಳಿ ಮತ್ತು ಮರು ಅರಣ್ಯೀಕರಣ ಸಾಧ್ಯವಾಗಿದೆ. ಅಲ್ಲದೆ, ಬಿಸಿಲಿನ ತಾಪಮಾನ ಮೊದಲಿಗಿಂತ 0.5 ಡಿಗ್ರಿ ಸೆಲ್ಸಿಯಷ್ಟು ಕಡಿಮೆಯಾಗಿದ್ದು, ಮಳೆಯ ಪ್ರಮಾಣವು 550 ಮಿ.ಮೀ. ಇದ್ದಿದ್ದು ಈಗ 650 ಮಿ.ಮೀ.ವರೆಗೂ ಹೆಚ್ಚಳ ಕಂಡಿದೆ ಎಂದು ಅವರು ವಿವರಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ: ಎಂ ಬಿ ಪಾಟೀಲ

ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಕ ಸಿಎಸ್ಆರ್ ನಿಧಿಯಡಿ ಮೊದಲ ಐದು ವರ್ಷ ತಲಾ 10 ಲಕ್ಷ ಸಸಿಗಳನ್ನು ವಿತರಿಸಲಾಯಿತು. ರೈತರಿಗೆ ತಮಗೆ ಬೇಕಾದ ಗಿಡಗಳನ್ನು ಉಚಿತವಾಗಿ ಹಂಚಲಾಗುತ್ತಿದೆ. ಇದಕ್ಕಾಗಿ 2016ರಲ್ಲಿ ಸರಕಾರದ ವಿಶೇಷ ಅನುದಾನವನ್ನೂ ಪಡೆದುಕೊಳ್ಳಲಾಗಿತ್ತು. ಇಂತಹ ಸೌಲಭ್ಯವನ್ನು ಮುಂದಿನ 5-10 ವರ್ಷಗಳಿಗೆ ವಿಸ್ತರಿಸಿಕೊಂಡು, 5 ಕೋಟಿ ಗಿಡ ನೆಡುವ ಮಹದಾಸೆ ನಮ್ಮದಾಗಿದೆ. ಈಗ ವಾರ್ಷಿಕ ಮಳೆಯ ದಿನಗಳು ಕೂಡ ಮೊದಲಿದ್ದ 20-30 ದಿನಗಳಿಂದ 40 ದಿನಗಳಿಗೆ ಹಿಗ್ಗಿದೆ ಎಂದು ಅವರು ನುಡಿದಿದ್ದಾರೆ.

ಕೋಟಿ ವೃಕ್ಷ ಅಭಿಯಾನದಿಂದ ವಿಜಯಪುರ ಜಿಲ್ಲೆಯಲ್ಲಿ ಜೀವವೈವಿಧ್ಯ ಪೋಷಣೆ ಸಾಧ್ಯವಾಗಿದ್ದು, 180ಕ್ಕೂ ಹೆಚ್ಚು ಬಗೆಯ ಗಿಡಗಳನ್ನು ನೆಡಲಾಗಿದೆ. ಇವುಗಳಿಗೆ ಹನಿ ನೀರಾವರಿ ಮತ್ತು ಸೌರವಿದ್ಯುತ್ ಮೂಲಕ ನೀರು ಪೂರೈಸಲಾಗುತ್ತಿದೆ. ವಿಜಯಪುರಕ್ಕೆ ನೀರು ಒದಗಿಸುವ ಭೂತನಾಳ ಕೆರೆಯ ಸುತ್ತಮುತ್ತ ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ. ಜೊತೆಗೆ ಮಮದಾಪುರ ಕೆರೆಯ ಪ್ರದೇಶದಲ್ಲಿ 1,600 ಎಕರೆಯಲ್ಲಿ 1.27 ಲಕ್ಷ ಗಿಡ ನೆಟ್ಟು ಹಸಿರು ಹೊದಿಕೆಯನ್ನು ಸೃಷ್ಟಿಸಲಾಗಿದೆ. ಇಲ್ಲಿ ಇನ್ನೂ 20 ಸಾವಿರಕ್ಕೂ ಹೆಚ್ಚು ಗಿಡ ನೆಡಲಾಗುವುದು. ಇದು ಉಳಿದ ಜಿಲ್ಲೆಗಳಿಗೆ ಮೇಲ್ಪಂಕ್ತಿಯಾಗುವಂತಿದೆ ಎಂದು ಪಾಟೀಲ ಹೇಳಿದ್ದಾರೆ.

ಕೋಟಿ ವೃಕ್ಷ ಅಭಿಯಾನದ ಮೂಲಕ ಹುಟ್ಟುಹಬ್ಬಕ್ಕೊಂದು ಗಿಡ, ರಕ್ಷಾಬಂಧನದಂದು ವೃಕ್ಷಬಂಧನ, ಏಪ್ರಿಲ್ ಕೂಲ್, ಸಮಾರಂಭಗಳಲ್ಲಿ ಸಸಿಗಳ ಕೊಡುಗೆ ಮುಂತಾದ ಹೆಜ್ಜೆಗಳನ್ನು ಪರಿಚಯಿಸಲಾಗಿದೆ.
ಅಭಿಯಾನದ ಸಂಚಾಲಕರಾದ ಮುರುಗೇಶ್ ಪಟ್ಟಣ ಶೆಟ್ಟಿ, ಪದಾಧಿಕಾರಿಗಳಾದ ವೀರೇಂದ್ರ ಗುಚ್ಚಟ್ಟಿ, ಡಾ. ರಾಜುಯಲಗೊಂಡ, ಸೋಮು ಮಠ ಗುರೂಜಿ, ನಂದೀಶ್ ಹುಂಡೇಕರ್ ಅವರು ಉಪಸ್ಥಿತರಿದ್ದರು

*ಡಿ.7ರಂದು ವೃಕ್ಷೋಥಾನ್-2025*


ವೃಕ್ಷೋಥಾನ್-2025 ಈ ಬಾರಿ ಡಿ.7ರ ಭಾನುವಾರ ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇದರಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ, ಸೇನಾ ಸಿಬ್ಬಂದಿ, ವಿಜಯಪುರ ಸೈಕ್ಲಿಂಗ್ ಗ್ರೂಪ್, ಅರಣ್ಯ ಇಲಾಖೆ, 50ಕ್ಕೂ ಹೆಚ್ಚು ಸಂಘಸಂಸ್ಥೆಗಳು ಸಕ್ರಿಯವಾಗಿ ತೊಡಗಿಕೊಳ್ಳಲಿವೆ. ಇದರಲ್ಲಿ ಒಟ್ಟು 10 ಲಕ್ಷ ರೂ. ಮೊತ್ತದ ಬಹುಮಾನ ನೀಡಲಾಗುವುದು. ವೃಕ್ಷೋಥಾನ್ ಯಾವುದೇ ವಯೋಮಿತಿಯ ನಿರ್ಬಂಧವಿಲ್ಲದೆ 5 ಕಿ.ಮೀ, 10 ಕಿ.ಮೀ. ಮತ್ತು 21 ಕಿ.ಮೀ. ವಿಭಾಗದಲ್ಲಿ ನಡೆಯಲಿದೆ. ಆಸಕ್ತರು www.vrukhothon.co.in ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಾರಿ ವೃಕ್ಷೋಥಾನ್ ಮೂಲಕ ವಿಜಯಪುರದ ಚಾರಿತ್ರಿಕ ತಾಣಗಳನ್ನೂ ಬೆಸೆಯಲಾಗಿದೆ. ಇದರಂತೆ ಗೋಲ್ ಗುಂಬಜ್, ಗಗನ್ ಮಹಲ್ ಸುಂದರೇಶ್ವರ ದೇವಸ್ಥಾನ, ಸೈನಿಕ್ ಸ್ಕೂಲ್, ನರಸಿಂಹಸ್ವಾಮಿ ದೇವಸ್ಥಾನ, ಸಿದ್ಧೇಶ್ವರ ದೇವಸ್ಥಾನ, ಇಬ್ರಾಹಿಂ ರೋಜಾ, ಬಾರಾ ಕಾಮಾನ್ ಗಳನ್ನು ಇದು ಹಾದು ಹೋಗಲಿದೆ ಎಂದು ಅವರು ಹೇಳಿದ್ದಾರೆ.

ಸ್ವಚ್ಚ, ಸುಂದರ, ಹಸಿರು ವಿಜಯಪುರಕ್ಕಾಗಿ ಓಡಿ’- ಈ ಬಾರಿಯೂ ವೃಕ್ಷೋಥಾನ್ ಹೆರಿಟೇಜ್ ರನ್ ಘೋಷ ವಾಖ್ಯಾ ಎಂದು ಅವರು ಹೇಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ