LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು

ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

news_1778058132_1_601.webp

ಮೈಸೂರು: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

*ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ*

 ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು  ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ.  ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು. 

*ಸ್ಥಳೀಯ ಸಂಸ್ಥೆಗಳ ಚುನಾವಣೆ*

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.

*ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು*

ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವುಬಾಗಲಕೋಟೆ ಉಪಚುನಾವಣೆ: ಸಿಎಂ ಭೇಟಿಯಾದ ಉಮೇಶ್ ಮೇಟಿಖಾವಿಯ ಹಿಂದಿನ ಕರಾಳ ಮಾರುಕಟ್ಟೆ: ನಂಬಿಕೆಯ ಬೆನ್ನೇರಿದ ಬಂಡವಾಳಶಾಹಿ ಸನ್ಯಾಸಮಳೆ ನೀರು ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿ: ರಮೇಶ್ಮಳೆ ನೀರು ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿ: ರಮೇಶ್ಬೆಂಗಳೂರು ಜಾಗತಿಕ ನಗರಗಳ ಜತೆ ಸ್ಪರ್ಧಿಸುವಂತೆ ಮಾಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್ಫೆಮಿನಾ ಮಿಸ್ ಇಂಡಿಯಾ 2026" ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿಗೆ CM ಅಭಿನಂದನೆ ಹಜ್ ಯಾತ್ರಿಗರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯಉಪ ಸಮರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪತ್ರಿಕಾಗೋಷ್ಠಿಕವಿಗಳಿಗೆ ಅಧ್ಯಯನ ಮತ್ತು ಅಧ್ಯಾಪನಗಳು ಅತ್ಯಗತ್ಯ : ಜಿಲ್ಲಾಧ್ಯಕ್ಷೆ ಸುಶೀಲಾ ಲ. ಗುರವ