LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಸುದ್ದಿ ಅಪ್ರಸುತ ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ

ಮೈಸೂರು; ಜಿಲ್ಲೆಯ ಕೆ.ಆರ್ ನಗರದ ರೇಡಿಯೋ ಮೈದಾನದಲ್ಲಿ ಕೆ ಆರ್ ನಗರ ಕ್ಷೇತ್ರದ ಜನತೆಯಿಂದ ಆಯೋಜಿಸಲಾಗಿದ್ದ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸನ್ಮಾನ್ಯ ಹೆಚ್.ಡಿ ಕುಮಾರಸ್ವಾಮಿ ಅವರ ಅಭಿಮಾನದ ಅಭಿನಂದನೆ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಪಾಲ್ಗೊಂಡರು.

ನಂತರ ಸಭೆಯಲ್ಲಿ ಮಾತನಾಡಿದ ಅವರು ; ಇತ್ತೀಚಿಗೆ ಅಷ್ಟೇ ವೈಜಾಕ್ ವಿಶಾಖಪಟ್ಟಣ ಸ್ಟೀಲ್ ಉಕ್ಕಿನ ಕೈಗಾರಿಕೆ ಬಹಳ ವರ್ಷಗಳಿಂದ ಮುಚ್ಚಿಹೋಗಿತ್ತು. ಅದಿಕ್ಕೆ ಜೀವ ಕೊಡಬೇಕು ಎಂದು ಕೇಂದ್ರದ ಆರ್ಥಿಕ ಸಚಿವರನ್ನ ಭೇಟಿ ಮಾಡಿ

ವೈಜಾಕ್ ಕಾರ್ಖಾನೆಗೆ ಬೇಕಾಗಿರುವ ಹಣವನ್ನ ಬಿಡುಗಡೆಮಾಡಿ ಎಂದು ಕುಮಾರಣ್ಣ ಅವರು ಮನವಿ ಮಾಡಿದ್ರು, ಅದರ ಫಲ ವಿಶಾಖಪಟ್ಟಣದಲ್ಲಿ ವೈಜಾಖ ಕಾರ್ಖಾನೆ ಆರಂಭವಾಗಿದೆ ಎಂದರು.

ರಾಜ್ಯ ಸರ್ಕಾರಕ್ಕೆ ಕೈ ಜೋಡಿಸಿ ನಿಖಿಲ್ ಮನವಿ

ನಮ್ಮ ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ಯುವ ಸಮುದಾಯದಲ್ಲಿ ಹೆಚ್ಚು ಇದೆ. ಆದ್ರೆ ವಿಪರ್ಯಾಸ ಇವತ್ತು ಯುವ ಸಮುದಾಯದ ಮಕ್ಕಳಿಗೆ ಉದ್ಯೋಗ ಸೃಷ್ಟಿ ಆಗಿಲ್ಲ, ಇದನ್ನ ಬಗೆ ಹರಿಸಬೇಕೆಂದು ಕುಮಾರಣ್ಣನ ಮನಸ್ಸಿನಲ್ಲಿದೆ ಈ ರಾಜ್ಯ ಸರ್ಕಾರಕ್ಕೆ ಕೈ ಜೋಡಿಸಿ ಮನವಿಮಾಡುತ್ತೀನಿ, ರಾಜ್ಯದಲ್ಲಿ ಬಹಳಷ್ಟು ಜನ ಉದ್ಯೋಗ ಇಲ್ಲ

ಇವತ್ತು ಕುಮಾರಣ್ಣನ ಕೇಂದ್ರ ಮಂತ್ರಿಯಾಗಿದ್ದಾರೆ ಇದಕ್ಕೆ ಪ್ರತಿಫಲ ಸಿಗಬೇಕು ಅಂದ್ರೆ ರಾಜ್ಯ ಸರ್ಕಾರ ಕುಮಾರಣ್ಣನ ಜತೆ ಕೈ ಜೋಡಿಸಬೇಕು ಎಂದು ನಿಖಿಲ್ ಅವರು ಮನವಿ ಮಾಡಿದರು.

ಉದಾಹರಣೆಗೆ ಹಳೆ ಮೈಸೂರು ಭಾಗದಲ್ಲಿ ತಂಬಾಕು ಬೆಳೆಗಾರರು ಸೂಕ್ತ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು ಆಗ ಕುಮಾರಣ್ಣ ದೆಹಲಿಯಲ್ಲಿ ಕೃಷಿ ಮಂತ್ರಿಗಳ ಜೊತೆ ಸಭೆ ನಡೆಸಿ ಪರಿಹಾರ ಅದಕ್ಕೆ ಬೇಕಾದ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಆತ್ಮವಿಶ್ವಾಸ ತುಂಬಿದರು.

ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ

ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಸುದ್ದಿ ಅಪ್ರಸುತ, ಪಕ್ಷದ ಚೌಕಟ್ಟಿನಲ್ಲಿ ಇದು ಯಾವುದು ಚರ್ಚೆ ಆಗಿಲ್ಲ ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ ಎಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಸಾರಾ ಮಹೇಶ್ ಅವರು, ಸಿ. ಎಸ್ ಪುಟ್ಟರಾಜು ಅವರು, ವೆಂಕಟರಾವ್ ನಾಡಗೌಡ ಅವರು, ವಿಧಾನ ಪರಿಷತ್ ಸದಸ್ಯರಾದ ಹೆಚ್. ವಿಶ್ವನಾಥ್ ಅವರು, ಶಾಸಕರಾದ ಜಿ. ಡಿ ಹರೀಶ್ ಗೌಡ ಅವರು, ಮಾಜಿ ಶಾಸಕರಾದ ಅಶ್ವಿನ್ ಕುಮಾರ್ ಅವರು, ವಿಧಾನ ಪರಿಷತ್ ಸದಸ್ಯರಾದ

ಮಂಜೇಗೌಡ ಅವರು, ವಿವೇಕಾನಂದ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಕಂಠೆಗೌಡ ಅವರು ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ