LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರಿಂದ ಗುಂಡಗಿರಿ?

ಬೆಂಗಳೂರು: ನಿನ್ನೆ ದೆಹಲಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರು ಸುಮಾರು 300 ಜನ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ ಮಾಡುವಾಗ ದೆಹಲಿ ಪೊಲೀಸರಿಂದ ಗೂಂಡಾಗಿರಿ ನಡೆದಿದೆ. ನಮಗೆ ಬಂದಿರುವ ಅನೇಕ ಮಾಹಿತಿಗಳ ಪ್ರಕಾರ ಕೆಲವು ಗೂಂಡಾಗಳನ್ನು ಪೊಲೀಸರ ಸಮವಸ್ತ್ರದಲ್ಲಿ ಕಳಿಸಿ ಪ್ರತಿಭಟನಾಕಾರರ ವಿರುದ್ಧ ಹಲ್ಲೆ ಮಾಡಲಾಗಿದೆ ಎಂದು KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ತಿಳಿಸಿದರು.news_1791459157_2_310.webp

ಕಾಂಗ್ರೆಸ್ ಕಛೇರಿಯಲ್ಲಿ ಬುಕೆ ಹರಿಪ್ರಸಾದ್ ನೇತೃತ್ವದಲ್ಲಿ ಸಭೆ ಮಾಡಿ ಮಾತನಾಡಿದರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸರ್ಕಾರ ಹಾಗೂ ಸಂವಿಧಾನಿಕ ಸಂಸ್ಥೆಗಳ ವಿರುದ್ಧ ಪ್ರತಿಭಟನೆ ಮಾಡುವ ಸಂಪೂರ್ಣ ಅಧಿಕಾರವಿದೆ. ರಾಹುಲ್ ಗಾಂಧಿ ಅವರು ದೇಶದ ಧ್ವನಿಯಾಗಿ ಪ್ರತಿಭಟನೆ ಮಾಡುವಾಗ ಅವರ ಮೇಲೆ ಆಗಿರುವ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಚುನಾವಣಾ ಆಯೋಗ ನಡೆದುಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ.

ನಿನ್ನೆ ವಿಜಯಪುರ ಜಿಲ್ಲೆಯಲ್ಲಿ ಜೀವಂತವಾಗಿರುವ ಮಹಿಳೆಯರನ್ನು ಮರಣ ಪಟ್ಟಿಯಲ್ಲಿ ಸೇರಿಸಿದ್ದು, ಅವರ ಮರಣ ಪ್ರಮಾಣಪತ್ರ ಕೂಡ ಸಲ್ಲಿಕೆ ಮಾಡಲಾಗಿದೆ. ಇದನ್ನು ನೋಡಿದರೆ ಚುನಾವಣಾ ಆಯೋಗದ ಅದಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವುದು ಸಾಬೀತಾಗುತ್ತದೆ. ಇನ್ನು ಮಲ್ಲೇಶ್ವರ ಕ್ಷೇತ್ರದಲ್ಲಿ 1211 ಮತಗಳನ್ನು ನಾವು ಗುರುತಿಸಿದ್ದು, ಕ್ಷೇತ್ರದ ವಿವಿಧ ಮತೆಗಟ್ಟೆಗಳಲ್ಲಿ ಒಂದೇ ದಿನ 1108 ಅರ್ಜಿಗಳು ಸಲ್ಲಿಕೆಯಾಗಿವೆ. 

ಮತಕಳ್ಳತನ ಆಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಹೋರಾಟದ ಭಾಗವಾಗಿ ಅ.10ರಿಂದ ಅ.20ರವರೆಗೆ ಪ್ರತಿ ಬ್ಲಾಕ್ ನಲ್ಲಿ ‘ಮತ ಉಳಿಸಿ ದೇಶ ಉಳಿಸಿ’ ಎಂಬ ಪಾದಯಾತ್ರೆ ಮಾಡುತ್ತೇವೆ. ಅಂಬೇಡ್ಕರ್ ಅಥವಾ ಗಾಂಧೀಜಿ ಅವರ ಪ್ರಿಮೆಯಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಸಾಗುವುದು. ಈ ಪಾದಯಾತ್ರೆ 5 ಕಿ.ಮೀ ಗಿಂತ ಹೆಚ್ಚು ಇರುವುದಿಲ್ಲ. ಬ್ಲಾಕ್ ನ ಹಿರಿಯ ನಾಯಕರು ಭಾಗವಹಿಸಲಿದ್ದು, ಡಿಸಿ ಭೇಟಿ ಬಳಿಕ ರಾಷ್ಟ್ರ ಗೀತಿ ಹಾಡುವುದು ಹಾಗೂ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ ಮಾಡಲಾಗುವುದು. 

ದಸರಾ ಸಂದರ್ಭದಲ್ಲಿ ಮತಗಳ್ಳತನದಿಂದ ಆಗುತ್ತಿರುವ ಅನಾಹುತದ ಬಗ್ಗೆ ಜನರಲ್ಲಿ ಜಾಗೃತಿ ಮಾಡಲಾಗುವುದು. ನಂತರ ಅ.25ರಿಂದ ನ.25ರವರೆಗೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕ ಸಭೆ ಹಾಗೂ ಮಾಧ್ಯಮಗೋಷ್ಠಿ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ರಾಜ್ಯದ ನಾಯಕರು ಆವರವರ ಜಿಲ್ಲೆಗಳ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಬ್ಲಾಕ್ ಅಧ್ಯಕ್ಷರು ಹಾಗೂ ಬಿಎಲ್ಎ2ಗಳಿಗೆ ಈ ಅಕ್ರಮದಿಂದ ಆಗುವ ಅನಾಹುತ ತಡೆಗಟ್ಟಲು ಮಾರ್ಗದರ್ಶನ ನೀಡಲಾಗುವುದು.news_1791459156_0_864.webp

ಇನ್ನು ಫಾರಂ 7 ಹಾಗೂ ಇತರ ಮೂಲಕ ಯಾರ ಹೆಸರನ್ನು ಮತಪಟ್ಟಿಯಿಂದ ಬಿಡಲಾಗಿದೆ ಅವರನ್ನು ಸೇರಿಸಿ ಸಭೆ ಮಾಡಲಾಗುವುದು. 

ASDDO ಮೂಲಕ ಹೆಸರು ಕೈಬಿಟ್ಟಿರುವವರಿಗೆ ಪಂಚಾಯ್ತಿ ಮಟ್ಟದಲ್ಲಿ ಸಮೀಕ್ಷೆ ಮಾಡಿ ಪರಿಶೀಲನೆ ಮಾಡಲಾಗುವುದು. ನ.1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಹೋರಾಟ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಮೋದಿ ಹಾಗೂ ಅಮಿತ್ ಶಾ ಸೇರಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಈ ಹೋರಾಟ ಮುಂದುವರಿಸುತ್ತೇವೆ.

ಮಾಧ್ಯಮಗೋಷ್ಠಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.news_1791459517_0_926.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೃಹತ್ ‘ಸೇವಾ ಜ್ಯೋತಿ ಯಾತ್ರೆ’- ಬೈಕ್ ರಾಲಿಗೆ ಚಾಲನೆ – ‘ವಿಕಸಿತ ಭಾರತ – ಸಂಕಲ್ಪ ಸಭೆ’ ಯಶಸ್ವಿಸಾರ್ವಜನಿಕ ಸಾರಿಗೆಯಲ್ಲಿ ನಾವೀನ್ಯತೆ: ಬಿಎಂಟಿಸಿಗೆ ‘ಚೇಂಜ್ ಮೇಕರ್ ಅವಾರ್ಡ್ಹೊಂಡಾ ಕಾರ್ಸ್ ಇಂಡಿಯಾದಿಂದ ಹೊಸ ಹೊಂಡಾ ಎಲಿವೇಟ್ ಬಿಡುಗಡೆಸ್ಟಿಂಗ್ ಬಗ್ಗೆ ಯಾರಿಗೆ ಜ್ಞಾನ ಜಾಸ್ತಿ ಅನ್ನೋದು ಜಗತ್ತಿಗೆ ಗೊತ್ತಿದೆ - ನಿಖಿಲ್ ಕುಮಾರಸ್ವಾಮಿ ಟಾಂಗ್50 ವರ್ಷಗಳಿಂದ ದಲಿತರ ಸಮಸ್ಯೆ ಈಡೇರಿಲ್ಲ ನೀವಾದರೂ ಈಡೇರಿಸ್ತೀರಾ? ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರಿಂದ ಗುಂಡಗಿರಿ?ಬ್ಲಾಕ್‌, ಮಂಡಲ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು; ‘ಮತ ಉಳಿಸಿ–ದೇಶ ಉಳಿಸಿ’ ಹೋರಾಟ ತೀವ್ರಗೊಳಿಸಲು ನಿರ್ಧಾರಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಬಳಸಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಸ್ಥಿತಿಗತಿ ಸಮೀಕ್ಷೆಎಸ್.ಬಿಂಗೀಪುರದಲ್ಲಿ ಪಾಲಿಕೆಯ ಪ್ರಾಣಿ ಚಿತಾಗಾರ ಸ್ಥಾಪನೆಗೆ ಯೋಜನೆ: ಆಯುಕ್ತ ಕೆ.ಎನ್. ರಮೇಶ್ಟಿ.ಡಿ.ಆರ್. ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ/ತಾಂತ್ರಿಕ ಕಾರ್ಯಾಗಾರ