LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಇಂದು ಮೈಸೂರಿನ ಐ ಬಿ ಸ್ ಸ್ಪೆಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಪ್ರಜಾವಾಣಿ ಸಾಧಕಿಯರು 2026 ವತಿಯಿಂದ *ಅವಳ ಸಾಧನೆ ಸಂಭ್ರಮ* ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ.ಇವೆರಡರ ಮಧ್ಯೆಯಿರುವ ಜೀವನದಲ್ಲಿ ಮನುಷ್ಯ ಸಮಾಜಮುಖಿಯಾಗಿ ಬದುಕಬೇಕಾಗಿರುವುದು ಮುಖ್ಯ. ಹುಟ್ಟಿದ ಮೇಲೆ ಸಾರ್ಥಕ ಜೀವನ ಮಾಡಬೇಕು. ಯಾವುದೇ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಅಗತ್ಯ ಮತ್ತು ಮುಖ್ಯ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

ಬದುಕು ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿರಬೇಕು. ಶಿಕ್ಷಣ ಪಡೆದ ಅನೇಕರಿಗೆ ಇವೆರಡೂ ಇರುವುದಿಲ್ಲ. ಅಂಥವರು ಸಮಾಜಮುಖಿಯಾಗಿರಲು ಸಾಧ್ಯವಿಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಂಡು ಬದುಕುವುದನ್ನು ಬಹಳಷ್ಟು ಜನ ಮಾಡುತ್ತಾರೆ. ಅಸಮಾನತೆಯಿಂದ ಕೂಡಿರುವ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಸಂವಿಧಾನ ಸಮಾಜದ ಅಸಮಾನತೆಯನ್ನು ತೊಡಗಿಸುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

*ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು.*
ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ದೊರಕಿರುವುದು ಸಾರ್ಥಕವಾಗುವುದಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎಂದರು.

*ಜೀವನದಲ್ಲಿ ಏನಾದರೂ ಸಾಧಿಸಬೇಕು*

ಎಲ್ಲರೂ ಜೀವನದಲ್ಲಿ ಏನಾದರೂ ಸಾಧಿಸಲು ಪ್ರಯತ್ನಿಸಬೇಕು. ಬದುಕಿನಲ್ಲಿ ಒಂದು ಗುರಿಯಿರಬೇಕು. ಅದನ್ನು ಸಾಧಿಸಲು ಛಲ, ಪ್ರಯತ್ನ ಅಗತ್ಯ ಎಂದರು. ಲಿಂಗತ್ವ ಅಲ್ಪಸಂಖ್ಯಾತರಾದ ಜಾನು, ಗೌಸಿಯಾ ಖಾನ್ ಮುಂತಾದವರು ಜೀವನವನ್ನು ಸಾರ್ಥಕಗೊಳಿಸಿದ್ದಾರೆ. ಜೀವನವನ್ನು ವ್ಯರ್ಥಗೊಳಿಸಲು ಬಿಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.

*ಸಾಧಕರನ್ನು ಗುರುತಿಸುವುದು ಶ್ಲಾಘನೀಯ*
ಎಲೆ ಮರೆ ಕಾಯಿಯಂತೆ ಇರುವ ಸಾಶಂಕರನ್ನು ಗುರುತಿಸುವ ಕೆಲಸವನ್ನು ಪ್ರಜಾವಾಣಿ ಮಾಡುತ್ತಿರುವುದು ಶ್ಲಾಘನೀಯ ಎಂದರು. ಪ್ರಶಸ್ತಿ ಪಡೆದ ಸಾಧಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಪ್ರಶಸ್ತಿಗಳು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತದೆ ಎಂದರು.

ಸಂಪಾದಕರಾದ ರವೀಂದ್ರ ಭಟ್, ರಾಣಿ ಪ್ರಮೋದಾ ದೇವಿ, ಅಕೈ ಪದ್ಮಶಾಲಿ ಸೇರಿ ಹಲವು ಪ್ರಮುಖರು ಮತ್ತು ಸಾಧಕಿಯರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ