
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಆಗುತ್ತಿರುವ ಜೀವ ಹಾನಿ ಬಗ್ಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ
ಮಾಲತೇಶ್ ಅರಸ್ ಅವರು ಅರಣ್ಯ ಸಚಿವರನ್ನು ಭೇಟಿ ಮಾಡಿ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಮನವಿ ಮಾಡಿದ್ದರು.
ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಸೂಚಿಸಿದ್ದಾರೆ.
ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿರುವುದು ಉತ್ತಮ ಕಾರ್ಯವಾಗಿದೆ.
ಈ ಮೂಲಕ ಮಾನವ- ವನ್ಯಜೀವಿ ಸಂಘರ್ಷ ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷರಾದ
ಮಾಲತೇಶ್ ಅರಸ್ ಅವರು ತಿಳಿಸಿದ್ದಾರೆ.