LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ–2026ರ ಸಂಬಂಧ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ದಿನಾಂಕ: 09.03.2026 ರಂದು ಪ್ರಕಟಿಸಲಾಗಿದೆ.

ಸದರಿ ಕರಡು ಮತದಾರರ ಪಟ್ಟಿಯ ಪ್ರತಿಗಳು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ವಾರ್ಡ್ ಕಚೇರಿಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತವೆ.

ಇದೇ ಮಾಹಿತಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿಯೂ https://gba.karnataka.gov.in/electoral2026 ಲಭ್ಯವಾಗುವಂತೆ ಮಾಡಲಾಗಿದೆ. ಮತದಾರರು ತಮ್ಮ ಹೆಸರನ್ನು Search by Name ಅಥವಾ Search by EPIC Number ಆಯ್ಕೆಗಳ ಮೂಲಕ ಪರಿಶೀಲಿಸಿಕೊಳ್ಳಬಹುದು.

ಪರಿಷ್ಕೃತ ಕರಡು ಮತದಾರರ ಪಟ್ಟಿಯ ಕುರಿತು ದೂರುಗಳು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 10.03.2026 ರಿಂದ 20.03.2026 ರವರೆಗೆ ಕಾಲಾವಕಾಶ ನೀಡಲಾಗಿತ್ತು. ನಂತರ, ಈ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಭಾಗವಹಿಸಿದ ಪ್ರತಿನಿಧಿಗಳು ದೂರು ಹಾಗೂ ಆಕ್ಷೇಪಣೆ ಸಲ್ಲಿಕೆ ಅವಧಿಯನ್ನು ವಿಸ್ತರಿಸಲು ಒಕ್ಕೊರಲಿನಿಂದ ಮನವಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಾನ್ಯ ರಾಜ್ಯ ಚುನಾವಣಾ ಆಯೋಗಕ್ಕೆ ಅವಧಿ ವಿಸ್ತರಣೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ಪರಿಗಣಿಸಿದ ಆಯೋಗವು ಸಾರ್ವಜನಿಕರು ಹಾಗೂ ಮತದಾರರಿಗೆ ಅನುಕೂಲವಾಗುವಂತೆ ದೂರು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 30.03.2026 ರವರೆಗೆ ವಿಸ್ತರಿಸಿದೆ.

ಇದೇ ವೇಳೆ, ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕವನ್ನು ದಿನಾಂಕ: 06.04.2026 ರಿಂದ *18.04.2026 ರವರೆಗೆ ಮುಂದೂಡಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!