ಬೆಂಗಳೂರು: ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ನಗರದ ವಕೀಲರ ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವಿ ಪತ್ರ ಸಲ್ಲಿಸಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿಯಾಗಿ ಹೈಕೋರ್ಟ್ ಸಂಚಾರಿ ಪೀಠದ ಬಗ್ಗೆ ಸಾಧಕ ಬಾದಕಗಳ ವಿಚಾರವಾಗಿ ಚರ್ಚೆಯನ್ನು ಸಹ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ , ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.