LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಬೆಂಗಳೂರು: ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನಕರ್ ಅವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಶನಿವಾರ ಬೆಳಗ್ಗೆ ಮಾಜಿ ಪ್ರಧಾನಮಂತ್ರಿಗಳಾದ  ಹೆಚ್.ಡಿ.ದೇವೆಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.

ಬೆಳಗ್ಗೆ ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ಶ್ರೀಮತಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ದೇವೇಗೌಡರಲ್ಲಿ ವಿಚಾರಿಸಿದರು.

ಚನ್ನಮ್ಮ ಅವರು ಆದಷ್ಟು ಬೇಗ ಗುಣಮಖರಾಗಲಿ, ಆ ನಂತರ ಅವರನ್ನು ತಾವು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ಉಪ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳಿಗೆ ತಿಳಿಸಿದರು. ಇದಕ್ಕೆ ಮಾಜಿ ಪ್ರಧಾನಿಗಳು ಸಮ್ಮತಿಸಿ, ತಮ್ಮ ಮೇಲೆ ತಾವು ಇರಿಸಿರುವ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನನ್ನ ಹೃದಯ ತುಂಬಿ ಬಂದಿದೆ. ತಮ್ಮ ಆಗಮನ ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಉಪ ರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಉಪ ರಾಷ್ಟ್ರಪತಿಗಳು, ಶ್ರೀಮತಿ ಸುದೇಶ್ ಧನಕರ್ ಅವರುಗಳು ಮಾಜಿ ಪ್ರಧಾನಿಗಳು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆಯಲ್ಲಿಯೇ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಅವರೆಲ್ಲರೂ ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಕುಟುಂಬದ ಎಲ್ಲಾ ಸದಸ್ಯರ ಕುಶಲೋಪರಿ ವಿಚಾರಿಸಿದರು. ವಿಶೇಷವಾಗಿ ಪುಟ್ಟ ಮಕ್ಕಳ ಜತೆ ಉಪ ರಾಷ್ಟ್ರಪತಿಗಳು ಕೆಲ ಕಾಲ ಕಳೆದರು.ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಗಳನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬರಮಾಡಿಕೊಂಡರು.

ಉಪ ರಾಷ್ಟ್ರಪತಿಗಳನ್ನು ಬೀಳ್ಕೊಟ್ಟ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಉಪ ರಾಷ್ಟ್ರಪತಿಗಳು ಹಾಗೂ ಮಾಜಿ ಪ್ರಧಾನಿಗಳ ನಡುವೆ ಸ್ನೇಹಪೂರ್ವಕ ಬಾಂಧವ್ಯ ಇದೆ. ಇಬ್ಬರೂ ಪರಸ್ಪರ ಗೌರವಭಾವ ಇರಿಸಿಕೊಂಡಿದ್ದು, ಅದರಲ್ಲಿಯೂ ಉಪ ರಾಷ್ಟ್ರಪತಿಗಳು ಮಾಜಿ ಅತ್ಯಂತ ಗೌರವ ಇರಿಸಿಕೊಂಡಿದ್ದೇನೆ. ಇದನ್ನು ಆನೇಕ ಸಲ ಕಣ್ಣಾರೆ ಕಂಡಿದ್ದೇನೆ ಎಂದರು.

ಇಬ್ಬರೂ ನಾಯಕರು ರೈತ ಕುಟುಂಬದ ಹಿನ್ನೆಲೆಯಿಂದ ಬಂದವರು. ಹೀಗಾಗಿ ಅವರಿಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು. ರೈತರ ಅಭಿವೃದ್ಧಿಯ ಬಗ್ಗೆ ಅವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಕೇಂದ್ರ ಸಚಿವರು ಮಾಹಿತಿ ಹಂಚಿಕೊಂಡರು.

ಅಲ್ಲದೆ, ಉಪ ರಾಷ್ಟ್ರಪತಿಗಳು ಅನೇಕ ಸಲ ಬೆಂಗಳೂರಿಗೆ ಬಂದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಇವತ್ತು ಭೇಟಿ ನೀಡಿದ್ದಾರೆ. ಇನ್ನೂ ನಮ್ಮ ತಾಯಿ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ವಿಶೇಷವಾಗಿ ಉಪ ರಾಷ್ಟ್ರಪತಿಗಳು ನಮ್ಮ ತಾಯಿಯವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗಬೇಕು ಎಂದು ಹಾರೈಸಿದರು. ಅವರು ತೋರಿದ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ