LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ-ಧಾರವಾಡ ತಯಾರಿಕಾ ಘಟಕದಲ್ಲಿ ₹ 600 ಕೋಟಿ ಹೂಡಿಕೆ


ಹುಬ್ಬಳ್ಳಿ-ಧಾರವಾಡ ತಯಾರಿಕಾ ಘಟಕದಲ್ಲಿ ₹ 600 ಕೋಟಿ ಹೂಡಿಕ 


• ಹೆಚ್ಚುವರಿ ₹ 150 ಕೋಟಿ ಹೂಡಿಕೆಯ ವಿಸ್ತರಣೆ; 800 ಉದ್ಯೋಗ ಅವಕಾಶಗಳ ಸೃಷ್ಟಿ
• ನಿಡೆಕ್‌ನ ಇಂಧನ ಸಂಗ್ರಹ ಪರಿಣತಿ ಬಳಸಿಕೊಳ್ಳುವ ಸಾಧ್ಯತೆಗಳ ಚರ್ಚೆ
• ಹೆಚ್ಚುವರಿಯಾಗಿ ಉತ್ಪಾದನೆಯಾಗುವ ವಿದ್ಯುತ್‌ ಶೇಖರಣೆಯ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆಗೆ ಕ್ರಮ


ಬೆಂಗಳೂರು: ʼಜಪಾನಿನ ನಿಡೆಕ್ ಕಾರ್ಪೋರೇಷನ್ ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚುವರಿಯಾಗಿ ₹150 ಕೋಟಿ ಹೂಡಿಕೆಯೊಂದಿಗೆ ತನ್ನ ತಯಾರಿಕಾ ಘಟಕ ವಿಸ್ತರಿಸಲಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.
ನಿಡೆಕ್ ಮೋಷನ್ ಆ್ಯಂಡ್ ಎನರ್ಜಿ ಅಧ್ಯಕ್ಷ ಮೈಕೆಲ್ ಬ್ರಿಗ್ಸ್ ಅವರು ಗುರುವಾರ ಇಲ್ಲಿ ಸಚಿವರ ಜೊತೆಗೆ ನಡೆಸಿದ ಸಭೆಯಲ್ಲಿ ಈ ವಿಸ್ತರಣಾ ಯೋಜನೆ ಪ್ರಕಟಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ತಿಳಿದಿದರು.

ನಿಡೆಕ್, ಈ ಹಿಂದೆ ರಾಜ್ಯದಲ್ಲಿ ₹ 450 ಕೋಟಿ ಹೂಡಿಕೆ ಮಾಡಿತ್ತು. ಸಚಿವ ಪಾಟೀಲ ಅವರ ಇತ್ತೀಚಿನ ಜಪಾನ್ ಭೇಟಿಯ ನಂತರ, ಕಂಪನಿಯು ಈಗ ಈ ಹೆಚ್ಚುವರಿ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ.
ʼಈ ಹೊಸ ಹೂಡಿಕೆಯು ಕರ್ನಾಟಕದ ಕೈಗಾರಿಕಾ ಉತ್ತೇಜನಾ ಕ್ರಮಗಳ ಬಗ್ಗೆ ನಿಡೆಕ್ ಹೊಂದಿರುವ ವಿಶ್ವಾಸದ ದ್ಯೋತಕವಾಗಿದೆ. ಈ ಯೋಜನೆಯ ಕಾಮಗಾರಿಯು 2025ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ ವೇಳೆಗೆ ಕಾರ್ಯಾರಂಭ ಮಾಡಲಿದೆ. ಈ ಯೋಜನೆಯ ವಿಸ್ತರಣೆಯಿಂದ 800 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆʼ ಎಂದು ಸಚಿವರು ಹೇಳಿದ್ದಾರೆ.

ಇಂಧನ ಸಂಗ್ರಹ ಪರಿಣತಿ ಬಳಕೆ: ಇಂಧನ ಸಂಗ್ರಹ ಕ್ಷೇತ್ರದಲ್ಲಿಯೂ ಪರಿಣತಿ ಮತ್ತು ಅಪಾರ ಅನುಭವ ಹೊಂದಿರುವ ನಿಡೆಕ್ ಸಹಯೋಗದಲ್ಲಿ ರಾಜ್ಯದಲ್ಲಿ ಉತ್ಪಾದನೆಯಾಗುವ ಹೆಚ್ಚುವರಿ ವಿದ್ಯುತ್ ಸಂಗ್ರಹದ ತಾಂತ್ರಿಕ ಸಾಧ್ಯತೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ರಾಸಾಯನಿಕಗಳಲ್ಲಿ ವಿದ್ಯುತ್‌ ಶೇಖರಣೆ ಮಾಡುವ ತಂತ್ರಜ್ಞಾನವು ಈಗಾಗಲೇ ಯುರೋಪ್‌ನಲ್ಲಿ ಬಳಕೆಯಲ್ಲಿದೆ. ಅದನ್ನು ರಾಜ್ಯದಲ್ಲಿಯೂ ಕಾರ್ಯಗತಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲಾಯಿತು.

ಈ ನಿಟ್ಟಿನಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಜೊತೆಗೆ ವಿವರವಾಗಿ ಚರ್ಚಿಸಲು ಕಂಪನಿಗೆ ಸೂಚಿಸಲಾಗಿದೆ. ಇಂಧನ ಸಚಿವರ ಜೊತೆ ಭೇಟಿ ನಿಗದಿಪಡಿಸಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ವಿದೇಶಗಳಲ್ಲಿ ಬಳಕೆಯಲ್ಲಿ ಇರುವ ಈ ತಂತ್ರಜ್ಞಾನವನ್ನು ರಾಜ್ಯದಲ್ಲಿಯೂ ಕಾರ್ಯಗತಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆʼ ಎಂದು ಸಚಿವ ಪಾಟೀಲ ಹೇಳಿದ್ದಾರೆ.

ನಿಡೆಕ್‌ ಇಂಡಿಯಾದ ಅಧ್ಯಕ್ಷ ಹಾಗೂ ಕಂಟ್ರಿ ಮ್ಯಾನೇಜರ್‌ ಗಿರೀಶ್ ಕುಲಕರ್ಣಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾಗಿರುವ ಗುಂಜನ್‌ ಕೃಷ್ಣ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ