LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ವಿಮಾನ ನಿಲ್ದಾಣ: ಮತ್ತೊಂದು ಸುತ್ತು ಚರ್ಚೆ ನಡೆಸಿದ ಸಚಿವ ಪಾಟೀಲ

ಬೆಂಗಳೂರು: ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧವಾಗಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ವಲಯದ ಪ್ರಮುಖರ ಜತೆ ಬುಧವಾರ ಇಲ್ಲಿ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, 'ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ' ಎಂದರು.

ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಇತ್ಯಾದಿ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ