LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ₹33,562 ಕೋಟಿ ರಿಯಲ್ ಎಸ್ಟೇಟ್ ಲೂಟಿ ಸಂಚು: 'Green over Greed' ಕರ್ನಾಟಕಕ್ಕೆ ಅನ್ವಯಿಸಲ್ವಾ? 

ಬೆಂಗಳೂರು: ವಂಡರ್ಲಾದಲ್ಲಿ ಮಜಾ ಮಾಡುತ್ತಿರುವ ಕಾಂಗ್ರೆಸ್ ಶಾಸಕರೇ, ನಿಮ್ಮ ಐಷಾರಾಮಿ ಪ್ರಪಂಚದಿಂದ ಹೊರಬಂದು ಪಕ್ಕದಲ್ಲೇ ಇರುವ ಬನ್ನಿಗಿರಿ ವ್ಯೂಪಾಯಿಂಟ್‌ಗೆ ಒಮ್ಮೆ ಭೇಟಿ ಕೊಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.news_1781797161_0_938.webp

ಸಾವಿರಾರು ಬಡ ರೈತ ಕುಟುಂಬಗಳ ಹೊಟ್ಟೆ ತುಂಬಿಸುತ್ತಿರುವ ಬಿಡದಿಯ ಈ ಅದ್ಭುತ ಹಸಿರನ್ನು ಕಣ್ಣಾರೆ ನೋಡಿ. ಕಳೆದ 470ಕ್ಕೂ ಹೆಚ್ಚು ದಿನಗಳಿಂದ ಈ ಬಡ ರೈತರು ತಮ್ಮ ಅಳಲು ತೋಡಿಕೊಳ್ಳಲು ಒಂದು ಸಭೆಗಾಗಿ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

*ನಿಖಿಲ್ ಗಂಭೀರ ಆರೋಪ:* 
 
ಇದೆಲ್ಲವೂ 'ಇಂಟಿಗ್ರೇಟೆಡ್ ಟೌನ್‌ಶಿಪ್' ಹೆಸರಿನಲ್ಲಿ ಬಡವರ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಒಪ್ಪಿಸಿ, 'ಪ್ರೀಮಿಯಂ' ಹೆಸರಿನಲ್ಲಿ ಬರೋಬ್ಬರಿ ₹33,562 ಕೋಟಿ ಆದಾಯ ಲೂಟಿ ಮಾಡಲು ನಡೆಸುತ್ತಿರುವ ಸಂಚು!" ಎಂದು ಅವರು ಕಿಡಿಕಾರಿದರು 

ಇನ್ನು ಮುಖ್ಯಮಂತ್ರಿಗಳು ಮಾಡದ ಕೆಲಸವನ್ನಾದರೂ ಕನಿಷ್ಠ ಶಾಸಕರು ಮಾಡಿ. ಆ ಹಸಿರನ್ನು ಕೊನೆಯ ಬಾರಿ ನೋಡಿ ಬನ್ನಿ. ಶ್ರೀ ರಾಹುಲ್ ಗಾಂಧಿಯವರ *'Green over Greed'* ಬೋಧನೆ ಕೇವಲ ಕರ್ನಾಟಕದ ಹೊರಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ನಿಖಿಲ್ ಪ್ರಶ್ನಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆಹಿಲ್ಟನ್ ಗಾರ್ಡನ್ ಇನ್ ಬೆಂಗಳೂರು ಎಂಬಸಿ ಟೆಕ್‌ವಿಲ್ಲಾದಿಂದ ದೇಸಿ ಕ್ವೋಶೆಂಟ್‌ಗೆ ಚಾಲನೆಏಸರ್‌ನಿಂದ CSR ನ ಅಡಿಯಲ್ಲಿ  ನೇತ್ರದೀಪ್ ಕಣ್ಣಿನ ಆರೈಕೆ ಕೇಂದ್ರ ಆರಂಭಕಲೀಲಾ ಚಿತ್ರದ ಮುಹೂರ್ತ ಪಂಚಮುಖಿ ಗಣೇಶ ದೇವಾಲಯದಲ್ಲಿ ಚಾಲನೆವಿದ್ಯಾರ್ಥಿಗಳು ವೃತ್ತಿ ಜೊತೆಗೆ ಪ್ರವೃತ್ತಿಯಲ್ಲೂ ಹೆಚ್ಚು ಗಮನ ಹರಿಸಬೇಕು: ಡಾ. ಚಂದ್ರ ಮೌಳಿ ಗಡ್ಡ ಮನಗೂನಗರದ ರಸ್ತೆ ಸಮಸ್ಯೆಗಳ ಪತ್ತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆ : ಆಯುಕ್ತ ಕೆ. ಎನ್. ರಮೇಶ್ಪ್ರತಿ 10 ಭಾರತೀಯ ಮಕ್ಕಳಲ್ಲಿ ಕೇವಲ ಮೂವರಿಗೆ ಮಾತ್ರ ಹೊಂದಾಣಿಕೆಯಾಗುವ ಮೂಳೆ ಮಜ್ಜೆ ದಾನಿ ಲಭ್ಯಕುಮಾರಣ್ಣ ಬಾಂಬು ಹಾಕುವ ಟೈಮು ಬಂದೇಬಿಡ್ತಾ?ಶಿಕ್ಷಕರಿಂದಾಗಿಯೇ ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಸಚಿವ ಮಧು ಬಂಗಾರಪ್ಪ ಬಣ್ಣನೆಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ ಕೈಕೊಂಡು,ಅಕಳಂಕಿತರಿಗೆ ನ್ಯಾಯ ನೀಡಿ: ಡಾ.ಹನುಮಂತಪ್ಪ