LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ ಎಂದರು.

ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ಇತರೆ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು.

ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಕರೆ ನೀಡಿದರು.

*ಬಾಕ್ಸ್*


ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ*

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ