LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರುನಾಡು ವಿಜಯ ಸೇನೆಯಿಂದ ಮಹಿಳಾ ದಿನಾಚರಣೆ

ಬೆಂಗಳೂರು: ಸಂಘಟನೆಗಳು ಧ್ವನಿ ಇಲ್ಲದವರ ಪರವಾಗಿ ಧ್ವನಿಯೆತ್ತುವ ಮೂಲಕ ನಿರಂತರವಾಗಿ ಹೋರಾಟ ಮಾಡುತ್ತಿರ ಬೇಕು ಎಂದು ಮಾಜಿ ಸಚಿವೆ ರಾಣಿ ಸತೀಶ್ ಕರೆ ನೀಡಿದರು.

ಕರುನಾಡ ವಿಜಯಸೇನೆ ವತಿಯಿಂದ ಗುರುವಾರ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಬೆಳವಾಡಿ ಮಲ್ಲಮ್ಮ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾರ್ಯಾಂಗ, ನ್ಯಾಯಾಂಗವಿದ್ದರೂ ಅನೇಕ ಅನ್ಯಾಯಗಳು ನಡೆಯುತ್ತಿದೆ. ಆ ನಿಟ್ಟಿನಲ್ಲಿ ಸಂಘಟನೆಗಳು ಧ್ವನಿ ಇಲ್ಲದವರ ಪರವಾಗಿ ಧ್ವನಿಯೆತ್ತುವ ಮೂಲಕ ನಿರಂತರವಾಗಿ ಹೋರಾಟ ಮಾಡುತ್ತಿರಬೇಕು ಎಂದರು.

ಶಿವಾಜಿರವರ ವಿರುದ್ಧ ಹೋರಾಡಿದ ಬೆಳವಾಡಿ ಮಲ್ಲಮ್ಮ ರವರು ನಮ್ಮೆಲ್ಲರ ಮನಸ್ಸಿನಲ್ಲಿ ಅಗ್ರಸ್ಥಾನದಲ್ಲಿದ್ದು, ಪ್ರಸ್ತುತ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಪ್ರಶಸ್ತಿಯು ಮಹಿಳೆಯರು ಇನಷ್ಟು ಸಮಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆಂದು ಅಭಿಪ್ರಾಯಾಪಟ್ಟರು.

ಗಾಯಕಿ ಸವಿತಾ ಗಣೇಶ್ ಪ್ರಸಾದ್ ಮಾತನಾಡಿ, ಮಹಿಳಾ ದಿನಾಚರಣೆ ಚೆನ್ನಾಗಿರಬೇಕಾದರೆ ಪ್ರತಿ ಮನೆಯಲ್ಲಿ ಮಹಿಳೆ ಯರಿಗೆ ಗೌರವ ಸಿಗಬೇಕು, ಆಗ ಸಮಾಜದಲ್ಲಿ ಗೌರವ ಸಿಗಲುಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ವಿಜಯಸೇನೆ ಅಧ್ಯಕ್ಷ ಎಚ್.ಎನ್.ದೀಪಕ್ ಕುಮಾರ್ ಮಾತನಾಡಿ, ಕರುನಾಡು ವಿಜಯ ಸೇನೆ ಸಂಘಟನೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬೆಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು, ಮಹಿಳಾ ದಿನಾಚರಣೆಯ ಮೇಲೆ ಸಂಘಟನೆಯಲ್ಲಿ ಹಾಗೂ ಸಮಾಜದಲ್ಲಿ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಅಂತವರನ್ನು ಗುರುತಿಸಿ ಸನ್ಮಾನ ಮಾಡುವ ಕಾರ್ಯಕ್ರಮವನ್ನು  ಮಾಡಲಾಯಿತು. ಎಲೆಮರೆಕಾಯಿಯಂತೆ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತೋರಿಸುವ ನಟ್ಟಿನಲ್ಲಿ ಹಾಗೂ ಸಾಧನೆ ಬಗ್ಗೆ ಇತರರಿಗೆ ಮನವರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಸಾಧನೆ ಮಾಡಿರವ ಮಹಿಳೆಯರ ಯಶೋಗಾತೆಯನ್ನು ಇತರರು ಪೂರ್ತಿಯಾಗಿ ತೆಗೆದುಕೊಂಡು ಸಾದಕೀಯರು ಸಾಧನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂಬುದು ನಮ್ಮ ಆಶಯವಾಗಿದೆ ಎಂದರೆ.

ಈ ಸಂದರ್ಭದಲ್ಲಿ ಐ ಕ್ಯಾಟ್ ಫೌಂಡೇಶನ್ ಅಧ್ಯಕ್ಷೆ ಡಾ. ಶಾಲಿನಿ ನಲವಾಡ್, ಲೇಖಕಿ ಚೈತ್ರಾ ಶಿವಯೋಗಿ ಮಠ, ಗಾಯಕಿ ಸವಿತಾ ಗಣೇಶ್ ಪ್ರಸಾದ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶೀಲಾ ಮಧು, ಎಸ್‌ಎಸ್‌ಬಿ ಸೊಲ್ಯೂಷನ್ಸ್ ವ್ಯವಸ್ಥಾಪಕ ನಿರ್ದೇಶಕಿ ಭವ್ಯರವರಿಗೆ ಮಲ್ಲಮ್ಮ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಡಾ.ಎಸ್. ಜಿ. ಸುಶೀಲಮ್ಮ, ವಿಜಯಸೇನೆ ಅಧ್ಯಕ್ಷ ಎಚ್.ಎನ್.ದೀಪಕ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ