LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಕಾರ ಸಾಮುದಾಯದ ಅ್ಯಪ್ ಮೂಲಕ ಸಮೀಕ್ಷೆಗೆ ಚಾಲನೆ

ಬೆಂಗಳೂರು : ಸರ್ಕಾರ ಮಾಡಿರುವ ಜಾತಿಗಣತಿ ಸಮೀಕ್ಷೆಯಲ್ಲಿ ನೇಕಾರ ಸಮುದಾಯದ ಜಾತಿಗಣತಿಗೆ  ಬಹಳ ವ್ಯತ್ಯಾಸ ಇದ್ಸು ಹೀಗಾಗಿ ನೇಕಾರ ಸಮುದಾಯದಿಂದ ಎಲ್ಲ 224 ಕ್ಷೇತ್ರಗಳಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಸ್ವತಃ ಸಮುದಾಯದಿಂದ ಆ್ಯಪ್ ಮೂಲಕ ಮಾಡಲಾಗುತ್ತದೆ ಎಂದು ನೇಕಾರ ಸಮುದಾಯದ ಒಕ್ಕೂಟದ ಅಧ್ಯಕ್ಷ ಸೊಮಶೇಕರ್ ತಿಳಿಸಿದರು.

ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಸುದ್ದಿಗೋಸ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ 'ಜಾತಿಗಣತಿ' ವರದಿಯನ್ನು ನೇಕಾರ ಸಮುದಾಯವು ಸ್ವಾಗತಿಸುತ್ತದೆ. ಆದರೆ   ರಾಜ್ಯದಲ್ಲಿರುವ ನೇಕಾರ ಸಮುದಾಯಗಳ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮವು ಅವೈಜ್ಞಾನಿಕವಾಗಿದೆ. ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿ-ಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತವನ್ನು ತಂದೊಡ್ಡಿದೆ.

ರಾಜ್ಯದ ನೇಕಾರ ಸಮುದಾಯವು ವರದಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೇಕಾರ ಸಮುದಾಯಗಳ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರುಗಳು ಸುಮಾರು ಐದಾರು ಸಭೆಗಳನ್ನು ನಡೆಸಿ ಮರುಸಮೀಕ್ಷೆಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ.

ನೇಕಾರ ಸಮುದಾಯವು ತನ್ನ ಸಮುದಾಯದ ನಿಖರ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ತನ್ನದೇ ಆದ 'ಆಪ್' ಅನ್ನು ಸಿದ್ಧಪಡಿಸಿದೆ. ಈ ಆಪ್ ಮೂಲಕ ರಾಜ್ಯದಲ್ಲಿರುವ ನೇಕಾರರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರುಗಳ ಮಾಹಿತಿಯನ್ನು ಒದಗಿಸಲು ಅನುಕೂಲ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದವರ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ ಕುಟುಂಬದ ಸದಸ್ಯರುಗಳ ಅಂಕಿ-ಅಂಶಗಳನ್ನು ಸಂಗ್ರಹಿಸಿ ಆಪ್‌ನಲ್ಲಿ ಅವುಗಳನ್ನು ದಾಖಲಿಸಲಾಗುವುದು.

3 ತಿಂಗಳ ಒಳಗಾಗಿ ಆಯ ಜಿಲ್ಲೆ,ತಾಲೂಕು ಮಟ್ಟದ ಸಮುದಾಯದವರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ. ನಮ್ಮ ಜನಸಂಖ್ಯೆ ಹೆಚ್ವು ಇದ್ದರೆ ಜನ ಪ್ರತಿನಿಧಿಗಳು, ಸರ್ಕಾರ ಕ್ಕೆ ನಮ್ಮ ಬಲವನ್ನು  ತೋರಿಸಲು, ಅನುಧಾನವನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಸುದ್ದಿ ಗೋಷ್ಟಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ರಾದ ಸುಬಾ ಬದ್ರಣ್ಣನವರ್, ರಾಜಶೇಕರ್, ಸೆರಿದಂತೆ ಒಕ್ಕೂಟ ದ ಅನೇಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ