LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಲ್ಲದೆ, ವಿದ್ಯುತ್ ಬಿಲ್,ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ: ಸಿಎಂ

ಮಂಡ್ಯ : ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.



ತಾಲ್ಲೂಕಿನ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಹಾಸ್ಟೆಲ್ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನೂತನ ಹಾಸ್ಟೆಲ್ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲಾ ಜಾತಿಯ ಬಡವರಿಗೂ ಅವಕಾಶ ಇರುತ್ತದೆ ಎಂದರು. ದಾನಿಗಳು ಕೊಟ್ಟಷ್ಟು ಕೊಡಲಿ. ನಾನೂ ಸಹಾಯ ಮಾಡುತ್ತೇನೆ. ಮಂಡ್ಯದ ಜನ ಹತ್ತಾರು ವರ್ಷಗಳಿಂದ ನನಗೆ ಬಂಬಲ ಕೊಡುತ್ತಲೇ ಬರುತ್ತಿದ್ದಾರೆ ಎಂದರು.

ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು. ಮಂಡ್ಯದ ಪ್ರಗತಿಯಲ್ಲಿ ಇವರ ಕೊಡುಗೆ ಅಪಾರ ಎಂದರು. ನಮ್ಮ ಸರ್ಕಾರ ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ ಎಂದರು.

ನೂತನ ಹಾಸ್ಟೆಲ್ ಕೇವಲ‌ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲಾ ಜಾತಿಯ ಬಡವರಿಗೂ ಅವಕಾಶ ಇರುತ್ತದೆ: ಸಿಎಂ"


ನಾನು ಮಂಡ್ಯದ ಈ ಹಾಸ್ಟೆಲ್ ಕಟ್ಟಡ ಶಿಥಿಲ ಆಗಿದ್ದನ್ನು ನೋಡಿದ್ದೆ. ಅನುದಾನ ಕೊಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶ ಈಡೇರಬೇಕಾದರೆ ಹಾಸ್ಟೆಲ್ ಗಳ ಅಗತ್ಯವಿದೆ. ಹಳ್ಳಿಗಾಡಿನ ಮಕ್ಕಳೂ ವೈದ್ಯರು, ಎಂಜಿನಿಯರ್ ಗಳಾಗಬೇಕು. ಕೇವಲ ಒಂದು ವರ್ಗದವರು ಮಾತ್ರ ಆಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂದರು.

ಇವತ್ತೇನಾದರೂ ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಉಳಿದಿದ್ದರೆ, ವೈದ್ಯ ಕಾಲೇಜು, ಕೃಷಿ ವಿವಿ ಬಂದಿದೆ ಎಂದರೆ ಅದಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವ ಚಲುವರಾಯಸ್ವಾಮಿ ಅವರ ಕಾಳಜಿ, ಶ್ರಮ ಕಾರಣ ಎಂದು ಸ್ಪಷ್ಟಪಡಿಸಿದರು.

ಕಳೆದ ವರ್ಷ ಮಳೆ-ಬೆಳೆ ಚನ್ನಾಗಿ ಆಗಿದೆ. ಸಿದ್ದರಾಮಯ್ಯ ಅವರ ಕಾಲಗುಣ ಸರಿ ಇಲ್ಲ ಎಂದು ಟೀಕಿಸುತ್ತಿದ್ದ ಬಿಜೆಪಿ-ಜೆಡಿಎಸ್ ನವರಿಗೆ ಮಳೆಯೇ ಉತ್ತರ ಕೊಟ್ಟಿದೆ. ಈ ವರ್ಷವೂ ಉತ್ತಮ ಮಳೆ ಬೆಳೆ ಆಗುವ ಭರವಸೆ ಇದೆ ಎಂದರು.

ಬಿಜೆಪಿ ನಿರಂತರವಾಗಿ ಸುಳ್ಳು ಹೇಳಿಕೊಂಡು ತಿರುಗುತ್ತಿದೆ. ಸರ್ಕಾರದ ಬೊಕ್ಕಸ ಖಾಲಿ ಎನ್ನುತ್ತಿದ್ದಾರೆ. ಒಂದು ಲಕ್ಷದ 35 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿಗೆ ತೆಗೆದಿರಿಸಿದ್ದೇವೆ. ಇದು ಜನರಿಗೆ ಕಾಣುತ್ತದೆ, ಬಿಜೆಪಿಯವರಿಗೆ ಕಾಣುತ್ತಿಲ್ಲ ಎಂದರು.

ಯಾರ್ಯಾರು ಅಕ್ಷರ ಸಂಸ್ಕೃತಿ ಮತ್ತು ಸಾಮಾಜಿಕ ಅವಕಾಶಗಳಿಂದ ವಂಚಿತರಾಗಿದ್ದಾರೋ ಅವರೆಲ್ಲರ ಪರವಾಗಿ ನಮ್ಮ ಸರ್ಕಾರ ಇರುತ್ತದೆ ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ