LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗುಂಜೂರು ಖೋ-ಖೋ ಕ್ಲಬ್ ನಿಂದ 44ನೇ ರಾಷ್ಟ್ರಮಟ್ಟದ ಜೂನಿಯರ್  ಖೋ-ಖೋ ಚಾಂಪಿಯನ್ ಶಿಪ್

ಬೆಂಗಳೂರು: ಪ್ರೆಸ್ ಕ್ಲಬ್ ಗುಂಜೂರು ಖೋ-ಖೋ ಕ್ಲಬ್ ವತಿಯಿಂದ ಗುಂಜೂರು ವಾಜಪೇಯಿ ಕ್ರೀಡಾಂಗಣದಲ್ಲಿ 44ನೇ ರಾಷ್ಟ್ರಮಟ್ಟದ ಜೂನಿಯರ್  ಖೋ-ಖೋ ಚಾಂಪಿಯನ್ ಶಿಪ್ ಅನ್ನು ಡಿ. 31ರಿಂದ  ಜ.4ರ ವರೆಗೆ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಲೋಕೇಶ್ವರ್ ಅವರು ತಿಳಿಸಿದರು.


ನಂತರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಖೋ-ಖೋ  ಅಂತರಾಷ್ಟ್ರೀಯ ಕ್ರೀಡೆಯಾಗಿದೆ. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿಯೂ ಸೇರ್ಪಡೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರಮೋದಿರವರು ಖೋ-ಖೋ ಕ್ರೀಡೆಯನ್ನು ಮುಂದಿನ ಓಲಂಪಿಕ್ ಗೇಮ್ಸ್ ನಲ್ಲಿ  ಖೋ-ಖೋ ಸೇರಿಸಲಾಗುತ್ತಿದೆ ಎಂದರು. ಗುಂಜೂರ್ ವಾಜಪೇಯಿ ಕ್ರೀಡಾಂಗಣದಲ್ಲಿ ಹೊನಲು-ಬೆಳಕಿನಲ್ಲಿ ಖೋ-ಖೋ ಪಂದ್ಯಾವಳಿ ನಡೆಯಲಿದ್ದು, ನಾಲ್ಕು ಕೋರ್ಟ್ ಗಳಲ್ಲಿ ಆಟ ನಡೆಯಲಿದೆ. ಇದರಲ್ಲಿ ಎರಡು ಮ್ಯಾಟ್ ಕೋರ್ಟ್ ಗಳಿವೆ, ದೇಶದ 32 ರಾಜ್ಯಗಳ ತಂಡಗಳು ಆಟದಲ್ಲಿ ಭಾಗವಹಿಸಲಿದ್ದಾರೆ.


ಖೋ-ಖೋ ಕ್ರೀಡೆ ದೈಹಿಕವಾಗಿ, ಬುದ್ದಿಕೌಶಲ್ಯ ಕ್ರೀಡೆಯಾಗಿದೆ. ಮಾನಸಿಕ ಮತ್ತು ದೈಹಿಕವಾಗಿ ಸಧೃಡವಾಗಿ ಇರಬೇಕು, ಖೋ-ಖೋ ಕ್ರೀಡೆಯನ್ನು ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕಲಿಯುವ ಮೂಲಕ ಆರೋಗ್ಯ,ಬೆಳೆಸಬೇಕು, ಈ ನಿಟ್ಟಿನಲ್ಲಿ ಪ್ರೋತ್ಸಾಹ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದರು. ಕ್ರೀಡೆಯಲ್ಲಿ ಗೆದ್ದವರಿಗೆ ಟ್ರೋಫಿ ನೀಡಲಾಗುತ್ತದೆ. ಆಟಗಾರರಿಗೆ ಊಟದ ವ್ಯವಸ್ಥೆಯನ್ನು ಸಹಾ ಮಾಡಲಾಗುದೆ ಎಂದರು.


ಜಿ.ಟಿ.ನಾಗೇಶ್ ರವರು ಮಾತನಾಡಿ, ಗುಂಜೂರ್ ಖೋ-ಖೋ ಆಟ ಸಾಕಷ್ಟು ಹೆಸರು ಪಡೆದುಕೊಂಡಿದೆ. ನಮ್ಮ ಕ್ಲಬ್ ನಿಂದ ಸಾಕಷ್ಟು ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದ ಆಟಗಾರರಾಗಿದ್ದಾರೆ.


ಖೋ-ಖೋ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ. ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಸಂಸದ ಪಿ.ಸಿ.ಮೋಹನ್ ಗಣ್ಯ ಮಹನೀಯರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.


 ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆ ಅಧ್ಯಕ್ಷರಾದ ಲೋಕೇಶ್ವರ್ ರವರು ಮತ್ತು ಗುಂಜೂರು ಖೋ-ಖೋ ಕ್ಲಬ್ ಅಧ್ಯಕ್ಷರಾದ ಜಿ.ಟಿ.ನಾಗೇಶ್ ರವರು , ಮತ್ತು ರಾಜ್ಯ ಖೋ-ಖೋ ಸಂಸ್ಥೆಯ ಪದಾಧಿಕಾರಿಗಳಾದ ಜಯರಾಮ್, ವೆಂಕಟೇಶ್, ಜಿ.ಟಿ.ಚಂದ್ರಪ್ಪ, ಜಗದೀಶ್ ,ಬಸವರಾಜ್ ರವರು  ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ