LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿ

*ಮಾಧ್ಯಮ ಪ್ರಕಟಣೆ:*

*ಬೆಂಗಳೂರು ಕೇಂದ್ರ ನಗರ ಪಾಲಿಕೆ*

ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಾಚರಣೆ :- ರಾಜೇಂದ್ರ ಚೋಳನ್*


*ಒಟ್ಟು 8.75 ಕಿ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ*

*260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿ*

*48 ಲೋಡ್ ತ್ಯಾಜ್ಯ ಹಾಗೂ 27 ಬ್ಲ್ಯಾಕ್ ಸ್ಪಾಟ್ ಗಳ ತೆರವು*

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರ ನೈರ್ಮಲ್ಯಕ್ಕೆ ಆದ್ಯತೆ ನೀಡಿ, ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತಗ್ರಳ ವಿವಿಧ ಸ್ಥಳಗಳಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು *ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್* ರವರು ತಿಳಿಸಿದರು.

ನಗರದ ಸ್ವಚ್ಛತೆ, ಸುವ್ಯವಸ್ಥೆ ಮತ್ತು ನಾಗರಿಕರಿಗೆ ಸುಗಮ ವಾತಾವರಣ ಒದಗಿಸುವ ನಿಟ್ಟಿನಲ್ಲಿ, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದೈನಂದಿನ ಸ್ವಚ್ಛತಾ ಕಾರ್ಯಗಳ ಜೊತೆಗೆ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

*ಇಂದು ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಂಡ ಸ್ಥಳಗಳ ವಿವರ:*

1) *ಚಾಮರಾಜಪೇಟೆ ಕ್ಷೇತ್ರ:*
6ನೇ ಅಡ್ಡ ರಸ್ತೆ, 4ನೇ ಮುಖ್ಯರಸ್ತೆ, ಚಾಮರಾಜಪೇಟೆ ಸುತ್ತಮುತ್ತಲ ಪ್ರದೇಶದಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

2) *ಚಿಕ್ಕಪೇಟೆ ಕ್ಷೇತ್ರ:*
ವಾರ್ಡ್ ಸಂಖ್ಯೆ-153 ರ ಬಿ.ಹೆಚ್.ಇ.ಎಲ್ ಲೇಔಟ್ 1, 2 & 3ನೇ ಅಡ್ಡರಸ್ತೆ ಮತ್ತು ಸುತ್ತ ಮುತ್ತಲಿನ ಕೂಡು ಪ್ರದೇಶಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ .

3) *ಗಾಂಧಿನಗರ ಕ್ಷೇತ್ರ:*
ಓಕಳಿಪುರಂ 2ನೇ ಮುಖ್ಯರಸ್ತೆ, ಓಕಳಿಪುರಂ ಸ್ಮಶಾನ
ಅವಿನ್ಯೂ ರಸ್ತೆ, ಕಿಲಾರಿ ರಸ್ತೆಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ .

4) *ಶಾಂತಿನಗರ ಕ್ಷೇತ್ರ:*
ರೆಸಿಡೆನ್ಸಿ ರೋಡ್, (ರಿಚ್ ಮಂಡ್ ವೃತ್ತದಿಂದ ಬ್ರಿಗೇಡ್ ರಸ್ತೆ ವೃತ್ತದವರೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

5) *ಶಿವಾಜಿನಗರ ಕ್ಷೇತ್ರ:*

ಕ್ವೀನ್ಸ್ ರೋಡ್ ಮತ್ತು ಬಂಬುಬಜಾರ್ ರಸ್ತೆ ಸುತ್ತಲಿನ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

6) *ಸಿ.ವಿ. ರಾಮನ್ ನಗರ ಕ್ಷೇತ್ರ:*
ಎನ್ ಆರ್ ಕಾಲೋನಿ ಮೇನ್ ರೋಡ್ ಜೀವನ್ ಭೀಮಾನಗರ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ *ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ರವರ ಮೇಲುಸ್ತುವಾರಿಯಲ್ಲಿ* ನಗರದ ಸ್ವಚ್ಛತೆ, ಸಂಚಾರ ಸುಗಮತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಇಂತಹ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸುತ್ತಿದ್ದು, ಇಂದು, *ಒಟ್ಟು 8.75 ಕಿ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದು 5 ಜೆಸಿಬಿ ಹಾಗೂ 41 ಟ್ರಾಕ್ಟರ್ ಗಳ ಸಹಾಯದಿಂದ ರಸ್ತೆ ಬದಿಯ 48 ಲೋಡ್ ತ್ಯಾಜ್ಯ ಹಾಗೂ 27 ಬ್ಲ್ಯಾಕ್ ಸ್ಪಾಟ್ ಗಳನ್ನು ತೆರವುಗೊಳಿಸಲಾಗಿದ್ದು, 260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು* ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಾಮೂಹಿಕ ಸ್ವಚ್ಛತಾ ಪಾದಚಾರಿ ಒತ್ತುವರಿ ಕಾರ್ಯದಲ್ಲಿ ಆಯಾ ವಿಭಾಗಗಳ ಕಾರ್ಯಪಾಲಕ ಅಭಿಯಂತರರು, ಡಿಜಿಎಂ ಗಳು, ಎ.ಜಿ.ಎಂ.ಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಅರಣ್ಯ, ತೋಟಗಾರಿಕೆ, ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ