LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.6ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಕುಂದು ಕೊರತೆಗಳ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಆದ ಸಿದ್ದರಾಮಯ್ಯ ರವರು 06-07-2024 ರಂದು ಶನಿವಾರ ಮದ್ಯಾಹ್ನ 3 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಾಲಯಕ್ಕೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನವಿಗಳು, ಕುಂದು ಕೊರತೆಗಳನ್ನು ಹಾಲಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ರವರು ಉಪಸ್ಥಿತರಿರುತ್ತಾರೆ.  ಮುಖ್ಯಮಂತ್ರಿಗಳು ಮದ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನವಿಗಳನ್ನು ಸ್ವೀಕರಿಸಲಿದ್ದು, ಪಕ್ಷದ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ. ಶಿವಕುಮಾರ್ ರವರು ಸೂಚಿಸಿರುತ್ತಾರೆ. ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿಗಳ ಭೇಟಿಗೆ ಪಕ್ಷದ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಮೊದಲು ಬಂದವರಿಗೆ /ನೋಂದಾಯಿಸಿಕೊಂಡವರಿಗೆ ಮೊದಲು ಆದ್ಯತೆ ನೀಡಲಾಗುವುದು.

ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಾಟ್ಸ್ ಅಪ್ ಮೊಬೈಲ್ ಸಂಖ್ಯೆ 7899116899 ರಲ್ಲಿ ತಮ್ಮ ಹೆಸರು, ವಯಸ್ಸು, ವಿಳಾಸ ಹಾಗೂ ಇತರ ಮಾಹಿತಿಯೊಂದಿಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಮಾಧ್ಯಮ ವಿಭಾಗದ ಉತ್ತರ ರಮೇಶ್ ಬಾಬು ಅವರು ಪತ್ರಿಕಾ ಪ್ರಕಟಣೆಯನ್ನು ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ