LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಕಟ್ಟಡ ಕುಸಿತಕ್ಕೆ ತುಷಾರ್ ಗಿರಿನಾಥ್ ಹೊಣೆ,ರಾಜೀನಾಮೆಗೆ ಆಮ್ ಆದ್ಮಿಪಕ್ಷ ಆಗ್ರಹ

ಬೆಂಗಳೂರು: ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್ ಪಾಳ್ಯದಲ್ಲಿ ನಡೆದ ಅಕ್ರಮ ಕಟ್ಟಡ ಕುಸಿತದ ಹೊಣೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಬೇಕು ಹಾಗೂ ಈ ಕೂಡಲೇ ಈ ಅಧಿಕಾರಿಯ ರಾಜೀನಾಮೆಯನ್ನು ಪಡೆಯಬೇಕೆಂದು ಆಮ್ ಆದ್ಮಿ ಪಕ್ಷ ಇಂದಿಲ್ಲಿ ಒತ್ತಾಯಿಸಿದೆ.

ಅವಘಡ ನಡೆದ ಸ್ಥಳಕ್ಕೆ ಪಕ್ಷದ ಕಾರ್ಯಕರ್ತರುಗಳು ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆ .ಆರ್. ಪುರಂ ಕ್ಷೇತ್ರದ ಪಕ್ಷದ ಮುಖಂಡರು ಹಾಗೂ ರಾಜ್ಯ ವೈದ್ಯರುಗಳ ಘಟಕದ ಅಧ್ಯಕ್ಷ ಡಾ. ಕೇಶವಕುಮಾರ್ ಹಾಗೂ ವಿಧಾನಸಭೆಯ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಸರ್ಕಾರವನ್ನು ಆಗ್ರಹಿಸಿದರು.

ಅನುಮೋದನೆಗೆ ವಿರುದ್ಧವಾಗಿ ಏಳು ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ಕಟ್ಟುತ್ತಿದ್ದ ಕಟ್ಟಡ ಮಾಲೀಕ ಹಾಗೂ ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ. ಹೊರ ರಾಜ್ಯಗಳ ಅಮಾಯಕ ಏಳು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಏನ್ ಡಿ ಆರ್ ಎಫ್ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಸಹ ಇಲ್ಲಿ ವಾಸಿಸುತ್ತಿರುವ 50 ಕಾರ್ಮಿಕ ಕುಟುಂಬಗಳಿಗೆ ನಿನ್ನೆಯಿಂದಲೂ ಅನ್ನ ಆಹಾರವಿಲ್ಲದೆ ಬಳಲುತ್ತಿದ್ದಾರೆ. ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ನಾಮಕಾವಸ್ತೆ ನಿನ್ನೆ ಭೇಟಿ ನೀಡಿ ಯಾವುದೇ ಕ್ರಮ ಕೈಗೊಳ್ಳದೆ ಹೊರಟಿದ್ದಾರೆ.

ಇದೇ ರೀತಿಯ ಅಕ್ರಮ ಕಟ್ಟಡಗಳು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲೂ ತಲೆಯೆತ್ತಿ ನಿಂತಿವೆ, ಇವುಗಳ ಸುರಕ್ಷತೆಯ ಬಗ್ಗೆ ಯಾವುದೇ ಖಾತರಿ ಇಲ್ಲದಾಗಿದೆ ಹಾಗೂ ಬಿಬಿಎಂಪಿಯ ಉನ್ನತ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಪಕ್ಷದ ಕಾರ್ಯಕರ್ತರುಗಳು ಒತ್ತಾಯಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ