LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೋವಾ ಮಾದರಿ ಗುಡ್ಡ ಕಡಿತ ನಿಷೇಧ ಆಗಲಿ: ಎಎಪಿ ಆಗ್ರಹ

ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಹೆದ್ದಾರಿಗಳ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಅವ್ಯಾಹತವಾಗಿ ಕಡಿಯುವುದನ್ನು ನಿಷೇಧಿಸಿ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಒತ್ತಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್‌ ವಿ. ಸದಂ, ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ಹೆದ್ದಾರಿ ನಿರ್ಮಿಸಿರುವುದೇ ಅನಾಹುತಕ್ಕೆ ಕಾರಣವಾಗಿದೆ. ಇದಕ್ಕೆ ಐಆರ್‌ಬಿ ಗುತ್ತಿಗೆದಾರ ಕಂಪನಿ ನೇರ ಹೊಣೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪನಿಯು ದುರ್ಮರಣಕ್ಕೀಡಾದವರ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಗುತ್ತಿಗೆದಾರ ಕಂಪನಿಯಲ್ಲಿ ಕೇಂದ್ರದ ಪ್ರಭಾವಿ ಸಚಿವರೊಬ್ಬರ ಪಾಲುದಾರಿಕೆ ಇದೆ ಎನ್ನಲಾಗಿದೆ. ಸಂಸದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ಮೌನ ಇದನ್ನು ಪುಷ್ಠೀಕರಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಪರಿಸರ ಸಂವೇದಿ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೊಳ್ಳುವ ಮೊದಲು ಪರಿಸರಕ್ಕೆ ಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕು. ಮುಂದಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಗೋವಾ ರಾಜ್ಯದಲ್ಲಿ ಈಗಾಗಲೇ ಗುಡ್ಡ ಕಡಿಯುವುದನ್ನು ನಿರ್ಬಂದಿಸಲಾಗಿದೆ. ಅದೇ ಮಾದಿಯಲ್ಲಿ ನಮ್ಮ ರಾಜ್ಯದಲ್ಲೂ ಗುಡ್ಡ ಕಡಿಯುವುದನ್ನು ನಿರ್ಬಂಧಿಸಬೇಕು. ಬಾಂಬೆ-ಪುಣೆ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಜಗದೀಶ್‌ ಸದಂ ಮನವಿ ಮಾಡಿದರು.

ಗುಡ್ಡದ ಮಧ್ಯೆ ರಸ್ತೆಗಳನ್ನು ನಿರ್ಮಿಸುವಾಗ ಬ್ರಿಟಿಷರ ಮಾದರಿಯ ತಡೆಗೋಡೆಗಳನ್ನು ಕಟ್ಟಬೇಕು. ದೇಶದಾದ್ಯಂತ ಬೆಟ್ಟಗುಡ್ಡಗಳ ನಡುವೆ ಬ್ರಿಟಿಷರು ನೂರಾರು ರೈಲ್ವೆ ಹಳಿಗಳನ್ನು ನಿರ್ಮಿಸಿದ್ದಾರೆ. ಬೃಹತ್‌ ಬೆಟ್ಟಗಳನ್ನು ಕೊರೆದಿದ್ದಾರೆ, ಸುರಂಗಗಳನ್ನು ನಿರ್ಮಿಸಿದ್ದಾರೆ. ಆದರೆ ಅವುಗಳಿಂದ ಗುಡ್ಡ ಕುಸಿತದಂತಹ ಅವಘಡಗಳು ಸಂಭವಿಸಿರುವ ಉದಾಹರಣೆಗಳು ಬಹಳ ಕಡಿಮೆ. ಆದರೆ ಈಗೀಗ ನಿರ್ಮಾಣಗೊಳ್ಳುತ್ತಿರುವ ಪ್ರತಿ ಕಾಮಗಾರಿಗಳಲ್ಲೂ ಏನಾದರೊಂದು ಅನಾಹುತಗಳು ಸಂಭವಿಸುತ್ತಿವೆ. ಜನರ ತೆರಿಗೆ ಹಣದಲ್ಲಿ ಕೋಟ್ಯಂತರ ವ್ಯಯಿಸಿ ನಿರ್ಮಾಣಗೊಳ್ಳುತ್ತಿರುವ ಇಂತಹ ಯೋಜನೆಗಳು ದುರಂತಗಳಿಗೆ ದಾರಿಯಾಗುತ್ತಿರುವುದು ಬೇಸರದ ಸಂಗತಿ. ಭ್ರಷ್ಟಾಚಾರ ನಿರ್ಮೂಲನೆಯಾಗದ ಹೊರತು ಸದೃಢ ಕಾಮಗಾರಿ ಅಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ