LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲೆಮಾರಿ ಜನಾಂಗಕ್ಕೆ ವಿಧಾನಪರಿಷತ್ ನಲ್ಲಿ ನಾಮನಿರ್ದೇಶನ ಮಾಡಲು ಎಎಪಿ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ನಾಲ್ಕು ನಾಮನಿರ್ದೇಶನ ಸ್ಥಾನಗಳಲ್ಲಿ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯತೆ ನೀಡಬೇಕೆಂದು ಆಗ್ರಹಿಸಿ ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿರವರಿಗೆ ಪತ್ರ ಬರೆಯುವ ಮೂಲಕ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ " ಸರ್ಕಾರ ಜಾರಿಗೆ ತಂದಿರುವ ಇತ್ತೀಚಿನ ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಸಾಕಷ್ಟು ಅನ್ಯಾಯವಾಗಿದೆ ಎಂಬ ಕೂಗು ಎಲ್ಲೆಡೆ ಕಂಡುಬರುತ್ತಿದೆ. ಸಾಕಷ್ಟು ಪ್ರತಿಭಟನೆಗಳು ಈಗಾಗಲೇ ನಡೆದಿದೆ. ನಮ್ಮ ಪಕ್ಷವೂ ಸಹ ಈ ಪ್ರತಿಭಟನೆಗಳಲ್ಲಿ ಸಾಕಷ್ಟು ಬಾರಿ ಭಾಗವಹಿಸಿ ಅವರ ಹಕ್ಕೊತ್ತಾಯ ಗಳಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿದೆ "

" ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಗಳಿಗೆ ಅನ್ಯಾಯ ಸರಿಪಡಿಸುವ ದಿಶೆಯಲ್ಲಿ ನಾಮನಿರ್ದೇಶನ ವಾಗುವ ವಿಧಾನಪರಿಷತ್ ಸ್ಥಾನಗಳಲ್ಲಿ ಈ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯತೆ ನೀಡಿ ಮೇಲೆತ್ತುವ ಕೆಲಸ ಆಗಬೇಕು. ಸಮಬಾಳು ಸಮಪಾಲು ಎಂದು ಸದಾ ಪ್ರತಿಪಾದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಇತ್ತ ಕಡೆ ಗಮನಹರಿಸಬೇಕೆಂಬ ಒತ್ತಡವನ್ನು ಎಲ್ಲರೂ ಹಾಕಬೇಕಿದೆ " ಎಂದು ಸೀತಾರಾಮ ಗುಂಡಪ್ಪ ಒತ್ತಾಯಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ