LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಬೇಡಿಕೆ ಈಡೇರಿಕೆಗೆ ಒತ್ತಾಯ: ಎಎಪಿ ಬೆಂಬಲ

ಬೆಂಗಳೂರು:ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳ ಹಕ್ಕೊತ್ತಾಯಗಳಿಗಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಎಲ್ಲಾ ದೇವದಾಸಿಯರಿಗೆ ನೀಡುವ ಮಾಸಿಕ ಧನಸಹಾಯವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಅವರ ಹೆಣ್ಣು ಮಕ್ಕಳಿಗೂ ಅದನ್ನು ವಿಸ್ತರಿಸಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಡಿಸೆಂಬರ್ 30ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹಗಳನ್ನು ಆಯೋಜಿಸಲಾಗಿದೆ.

ಬೃಹತ್ ಪ್ರತಿಭಟನಾ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪ್ರತಿಭಟನಾನಿರತರಿಗೆ ತಮ್ಮ ಪಕ್ಷದ ಬೆಂಬಲವಿರುವುದಾಗಿ ಘೋಷಿಸಿದರು. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಡಿಸೆಂಬರ್ 28, 29 ಮತ್ತು 30ರಂದು ಬೃಹತ್ ಪ್ರತಿಭಟನಾ ಧರಣಿ- ಸತ್ಯಾಗ್ರಹವನ್ನು ಹಮ್ಮಿಕೊಂಡಿವೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ