LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಪೌರ ಕಾರ್ಮಿಕರೇ ದಿಟ್ಟ ಮಹಿಳೆಯರು: ನಟಿ ವಿನಯಾ ಪ್ರಸಾದ್

ಬೆಂಗಳೂರು: ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುವ ಮಹಿಳಾ ಪೌರ ಕಾರ್ಮಿಕರೇ ದಿಟ್ಟ ಮಹಿಳೆಯರು ಎಂದು  ಹಿರಿಯ ಕಲಾವಿದೆ ವಿನಯಾ ಪ್ರಸಾದ್ ಬಣ್ಣಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಾಧಕಿಯರಿಗೆ "ದಿಟ್ಟ ಮಹಿಳಾ ಪ್ರಶಸ್ತಿ' ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಎಲ್ಲಾ ರಸ್ತೆಗಳನ್ನು ಸ್ವಚ್ಛಗೊಳಿಸುವ ಮಹಿಳೆಯರಿಗೆ (ಪೌರಕಾರ್ಮಿಕರಿಗೆ) ದಿಟ್ಟ ಮಹಿಳಾ ಪ್ರಶಸ್ತಿ ಧಕ್ಕಬೇಕು. ಮಳೆ, ಬಿಸಿಲು, ಗಾಳಿ, ಧೂಳು ಏನೇ ಇದ್ದರೂ ಅವರು ಸಂತೋಷದಿಂದ ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಾರೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

"ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಮಾತನಾಡಿ, ತಾಯಿಯ ತ್ಯಾಗ ಬಹಳ ದೊಡ್ಡದ್ದಾಗಿದ್ದು, ಹೆಣ್ಣು ತನ್ನ ದಿಟ್ಟತನವನ್ನು ರೂಪಿಸಿಕೊಳ್ಳಲು ದಿಟ್ಟತನದಿಂದಲೇ ಇರಬೇಕು. ಆಗಲೇ ಈ ಜೀವನದ ಹೋರಾಟದಲ್ಲಿ ಗೆಲ್ಲಲು ಸಾಧ್ಯ. ವೇದ, ಪುರಾಣ ಕಾಲದಿಂದಲು ಹೆಣ್ಣಿನ ಶಕ್ತಿ ಏನೆಂಬುದು ತಿಳಿದಿದೆ. ಹೆಣ್ಣು ಎಂದರೆ ಜೀವನಪೂರ್ತಿ ತ್ಯಾಗವೆ ಆಗಿದೆ. ಆಮ್ಲ ಎಂದರೆ ನೋವು ನುಂಗಿಕೊಂಡು ತ್ಯಾಗ ಮಾಡಿ ದಿಟ್ಟತನ ತೋರಿಸುತ್ತಾಳೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಅಮೃತ್‌ ರಾಜ್ ಮಾತನಾಡಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ನಾಡು, ನುಡಿ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬರುತ್ತಿದೆ. ಕನ್ನಡ ಭಾಷೆ ಉಳಿಸಿ, ಬೆಳೆಸಲು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಭಾರತಿ ವಿಷ್ಣುವರ್ಧನ್, ಜಯಮಾಲ, ಸರಿತಾ, ಗೀತಾ, ಅಂಬಿಕಾ, ಲಕ್ಷ್ಮಿ ಗೋವಿಂದರಾಜು, ಪೂರ್ಣಿಮಾ ರಾಮ್ ಮತ್ತಿತರರಿಗೆ ದಿಟ್ಟಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ವಿಶೇಷ ಆಯುಕ್ತರಾದ ಡಾ.ಕೆ.ಹರೀಶ್ ಕುಮಾರ್, ಪ್ರೀತಿ ಗೆಹೋಟ್, ವಲಯ ಆಯುಕ್ತರಾದ ಕರೀಗೌಡ, ಕೆ.ಎನ್ ರಮೇಶ್, ಸ್ನೇಹಲ್ ಆರ್, ಅರ್ಚನಾ ಎಂ.ಎಸ್. ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಮತ್ತಿತರರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ