LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಎಂ ಬಿ ಪಾಟೀಲ ಪತ್ರ

ಬೆಂಗಳೂರು: ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಸಂಬಂಧವಾಗಿ ಅವರು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಇದಾದ ಮೇಲೆ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ ಕೆಲ ತಿಂಗಳಿನಿಂದ ಇದು ಸ್ಥಗಿತಗೊಂಡಿದ್ದು, ತೊಂದರೆಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ಇದರಿಂದ ಹಾನಿಯಾಗಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಶಿವಮೊಗ್ಗದಿಂದ ಬೆಂಗಳೂರು ನಗರಕ್ಕೆ ನೇರ ವಿಮಾನ ಇಲ್ಲದೆ ಇರುವುದರಿಂದ ದೇಶದ ಬೇರೆಬೇರೆ ಭಾಗಗಳು ಮತ್ತು ವಿದೇಶಗಳಿಗೆ ಹೋಗುವವರಿಗೂ ತೊಂದರೆಯಾಗಿದೆ. ಆದ್ದರಿಂದ ವಿಜಿಟಿ ಫಂಡ್ ನೆರವಿನ ಮೂಲಕ ಉಡಾನ್ ಯೋಜನೆಯ ಉದ್ದೇಶಿತ ಬಿಡ್ ನಲ್ಲಿ ಈ ಮಾರ್ಗದ ಸೇರ್ಪಡೆ ಮಾಡಲು ತಾವು ಮಧ್ಯೆ ಪ್ರವೇಶಿಸಬೇಕು ಎಂದು ಅವರು ವಿವರಿಸಿದ್ದಾರೆ.

ಶಿವಮೊಗ್ಗ ವಿಮಾನ‌ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ಸಮುದಾಯ ನಾಯಿಗಳ ಸಂಖ್ಯೆಯನ್ನು ಆಧರಿಸಿ ಹೆಚ್ಚುವರಿ ಆಹಾರ ತಾಣಗಳ ಗುರುತು: ಮಹೇಶ್ವರ್ ರಾವ್ಐತಿಹಾಸಿಕ ಕೆಂಪಾಂಬುಧಿ ಕೆರೆ ಅಭಿವೃದ್ಧಿಗೆ ಡಿಪಿಆರ್ ತಯಾರಿಸಿ: ಡಾ: ರಾಜೇಂದ್ರ ಕೆ. ವಿ ಪಾಲಿಕೆಯ ಪಿಯು ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು: ರಮೇಶ್ಜಿಬಿಎ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ಜಿಐಎಸ್ ಮ್ಯಾಪಿಂಗ್ ಮೂಲಕ ಏಕೀಕರಣಗೊಳಿಸಿ: ಮಹೇಶ್ವರ್ ರಾವ್ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಎಂ ಬಿ ಪಾಟೀಲ ಪತ್ರ80ರ ದಶಕದ ಸೈದ್ದಾಂತಿಕ ಹೋರಾಟ, ಚಳವಳಿಗೆ ಕವಿ ಡಾ. ಸಿದ್ದಲಿಂಗಯ್ಯ ಸಾಕ್ಷಿ: ಮಾವಳ್ಳಿ ಶಂಕರ್ಕುಮಾರ ಕೃಪ ಕಟ್ಟಡವನ್ನು ಸ್ವಾರ್ಥಕ್ಕಾಗಿ ಸಿಎಂ‍ DK ಮಾರ್ಪಾಡು ಮಾಡುವುದು ಖಂಡನಿಯ: HDK    ‘TCS’ ಮತ್ತು ‘SBI’ ನಂತರ ‘ವಿಪ್ರೋ’ದಲ್ಲೂ ‘ಕಾರ್ಪೊರೇಟ್ ಜಿಹಾದ್ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ : HJS