LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತಡ ನಿರ್ವಹಣೆಯಿಂದ ಸಮರ್ಪಕ ಕಾರ್ಯನಿರ್ವಹಣೆ ಸಾಧ್ಯ: ಡಾ. ರೋಹಿತ್ ನಾಗೇಶ್

ಬೆಂಗಳೂರು: ದಿನನಿತ್ಯದ ಕಾರ್ಯಗಳಲ್ಲಿ ಒತ್ತಡ ಹೆಚ್ಚಾಗುವುದು ಸಹಜ, ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸನ್ನದ್ದರಾಗಿರಬೇಕು. ಇದರಿಂದ ನಮ್ಮ ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಎಂದು ಮೋಟಿವೇಷನಲ್‌ ಸ್ಪೀಕರ್‌ ಡಾ. ರೋಹಿತ್ ನಾಗೇಶ್ ಅಭಿಪ್ರಾಯಪಟ್ಟರು.

ಇಂದು ಕಾವೇರಿ ಭವನದ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ ಆಯೋಜಿಸಿದ್ದ "ವ್ಯಕ್ತಿತ್ವ ವಿಕಸನ ಮತ್ತು ಒತ್ತಡರಹಿತ ಜೀವನ" ಎನ್ನುವ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಜವಾಬ್ದಾರಿಯುತ ಸ್ಥಾನದಲ್ಲಿ ಕಾರ್ಯನಿರ್ವಹಣೆಯ ಸಂಧರ್ಭದಲ್ಲಿ ಒತ್ತಡಕ್ಕೆ ಒಳಗಾಗುವುದು ಸಹಜ. ಅದನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸನ್ನದ್ದರಾಗಿಬೇಕು. ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದತ್ತ ಹೆಚ್ಚಿನ ಆದ್ಯತೆ ನೀಡುವ ಮೂಲಕ ಒತ್ತಡವನ್ನು ನಿಭಾಯಿಸುವುದು ಹಾಗೂ ಹೆಚ್ಚಿನ ಒತ್ತಡಕ್ಕೆ ಒಳಗಾಗದಂತೆ ಜೀವನವನ್ನು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಜೀವನಶೈಲಿಯ ಬದಲಾವಣೆಗೆ ಆದ್ಯತೆ ನೀಡಬೇಕು. ಸಮರ್ಪಕ ಒತ್ತಡ ನಿರ್ವಹಣೆಯಿಂದ ನಮ್ಮ ಕಾರ್ಯಕ್ಷಮತೆ ಬಹಳಷ್ಟು ಹೆಚ್ಚಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅಭಿಯಂತರರಾದರಾದ ಬಿ ಸುರೇಶ್, ಬೆಂಗಳೂರು ಜಲ ಮಂಡಳಿ ಅಭಿಯಂತರರ ಸಂಘದ ಅಧ್ಯಕ್ಷರಾದ ಬಿ ಸಿ ಗಂಗಾಧರ್ , ಮಂಡಳಿಯ ಆಡಳಿತಾಧಿಕಾರಿಯಾದ ರಂಜಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ