LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂರೂ ಹಂತದ ಸಮೀಕ್ಷೆ ನಡೆಯಲಿದೆ: ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಿ: ಸಿ.ಎಂ ಮನವಿ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

"ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025" ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು.

ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025

19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.

*ಮೊಬೈಲ್ ಆಪ್*

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ