LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಬಳಗದಿಂದ ಏ.13 ಮಧ್ಯರಾತ್ರಿ ಅಂಬೇಡ್ಕರ್ ಜಯಂತಿ ಆಚರಣೆ

ಬೆಂಗಳೂರು: ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಮಾಡುವುದು ರೂಡಿಯಲ್ಲಿದೆ. ಆದರೆ ಸಂವಿಧಾನ ಬಳಗದಿಂದ ಏಪ್ರಿಲ್ 13 ಮಧ್ಯರಾತ್ರಿ ವಿಶೇಷವಾಗಿ ರಾಜ್ಯದಲ್ಲಿಯೇ ಮೊದಲ ಅಂಬೇಡ್ಕರ್ ಜಯಂತಿ ಆಚರಣೆ ಮಾಡುತ್ತಿರುವುದು ವಿಶೇಷವಾಗಿದೆ ಎಂದು ಸಂವಿಧಾನ ಬರೆದ ಅಧ್ಯಕ್ಷ ಜಯಕಾಂತ ಚಾಲುಕ್ಯ ತಿಳಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದ ಅವರು, ರಾಜ ದೇಶದಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು  ಆಚರಣೆ ಮಾಡುವುದು ರೂಢಿಯಲ್ಲಿದೆ ಆದರೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಂವಿಧಾನ ಬಳಗದಿಂದ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 13ರ ಮಧ್ಯರಾತ್ರಿಯಂದ ವಿಶೇಷವಾಗಿ ಆಚರಣೆ ಮಾಡುತ್ತಿರುವುದು ರಾಜ್ಯದಲ್ಲಿಯೇ ಮೊದಲ ಸಂಘಟನೆಯಾಗಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಹೊಸ ವರ್ಷ ಆಚರಣೆಯನ್ನು ಪ್ರತಿವರ್ಷವು ಸಹ ಡಿಸೆಂಬರ್ 31ರಂದು ಜನಸಾಮಾನ್ಯರೆಲ್ಲರೂ ಸಹ ಮಧ್ಯರಾತ್ರಿಯಿದ ಆಚರಣೆ ಮಾಡುತ್ತಾರೆ, ಆದರೆ ದೇಶದ ನಾಗರಿಕರು, ಹಿಂದುಳಿದವರು ಜನಸಾಮಾನ್ಯರು ಆಚರಿಸಬೇಕೆಂದಂತಹ ದಿನ ಎಂದರೆ ಏಪ್ರಿಲ್ 14ರಂದು ಅಂದರೆ ಅಂದು ಅಂಬೇಡ್ಕರ್ ಜಯಂತಿ ಇದೆ ಎಲ್ಲಾ ದಲಿತರಿಗೂ ಹೊಸ ವರ್ಷ ಆಚರಣೆ, ಹೀಗಾಗಿ ಅಂಬೇಡ್ಕರ್ ಜಯಂತಿಯನ್ನು ವೈಭವೀಕರಣವಾಗಿ ಅದ್ಭುತವಾಗಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಒಂದು ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಮಾಡುತ್ತಿದ್ದು ಎಲ್ಲಾ ರಾಜಕೀಯ ಮುಖಂಡರು, ನಾಯಕರು, ಅಧಿಕಾರಿ ವರ್ಗದವರು, ನಾಡಿನ ಚಿಂತಕರು, ಹೋರಾಟಗಾರರು, ಅನೇಕ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಅಭಿಮಾನಿಗಳು ಸಂವಿಧಾನದ ಅಭಿಮಾನಿಗಳು, ಜನಸಾಮಾನ್ಯರು ಎಲ್ಲಾ ಧರ್ಮದವರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ