LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್‍ಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‍ಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್ ನೀಡಲಾಗುವುದು. ಫೆಲೋಷಿಪ್ ಅವಧಿ 6 ತಿಂಗಳು.

ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‍ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿ ಸ್ವೀಕರಿಸಲು 2 ನೇ ಆಗಸ್ಟ್ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಫೆಲೋಷಿಪ್‍ನ ವಿಷಯಗಳು:
1. ಬಾಲ್ಯವಿವಾಹ, POCSO, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ
2. ಕೃಷಿ ಸಂವಹನ- ಒಂದು ಅಧ್ಯಯನ
3. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ
4. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುμÁ್ಠನ- ಮಾಧ್ಯಮ ನೋಟ
5.  Role of Media in creating awareness on cyber crime and digital safety (ಇಂಗ್ಲಿμïನಲ್ಲಿ ಅಧ್ಯಯನ ವರದಿ ಸಲ್ಲಿಸುವುದು)
6. ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ

ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‍ಸೈಟ್ mediaacademy.karnataka.gov.in
ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು 560001 ಇವರಿಗೆ ಕಳುಹಿಸಬಹುದು ಅಥವಾ [email protected] ಗೆ ಇ - ಮೇಲ್ ಮೂಲಕ ಕಳಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ