
ಬೆಂಗಳೂರು : ಬಾಗಲಕೋಟ ವಿಧಾನಸಭೆ ಕ್ಷೇತ್ರದ ಮರು ಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್ ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುಷ್ಪಗುಚುನಡಿಯ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ಗೆ ತೆರಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿ ಪಕ್ಷದಲ್ಲಿ ಸಹಕರಿಸಿದ ಎಲ್ಲಾ ಮಂತ್ರಿ ಮಹಾ ಬರೆಯರಿಗೂ ಶಾಸಕರಿಗೂ ಕಾರ್ಯಕರ್ತರಿಗೂ ಕೃತಜ್ಞತಾಪೂರ್ವಕವಾಗಿ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಉಮೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಟಿ ಹಾಗೂ ಬಾಗಲಕೋಟೆಯ ಯುವ ಮುಖಂಡ ಹೊಳಬಸು ಶೆಟ್ಟರ್ ಹಾಜರಿದ್ದರು.