LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ವಿವಿ – ಐಸಿಎಸ್ಐ ಬೆಂಗಳೂರು ಚಾಪ್ಟರ್ ನಡುವೆ ಶೈಕ್ಷಣಿಕ ಚಟುವಟಿಕೆಗಾಗಿ ಒಪ್ಪಂದ: ಸಿ.ಎಸ್. ಧನಂಜಯ್ ಶುಕ್ಲಾ

ಬೆಂಗಳೂರು; ಕೇಂದ್ರ ಸಾಂಸ್ಥಿಕ ವ್ಯವಹಾರಗಳ ವ್ಯಾಪ್ತಿಗೆ ಒಳಪಡುವ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ – ಬೆಂಗಳೂರು ಚಾಪ್ಟರ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಹಕಾರ ಪ್ರಾರಂಭವಾಗಲಿವೆ ಎಂದು ಐಸಿಎಸ್ಐ ನೂತನ ರಾಷ್ಟ್ರೀಯ ಅಧ್ಯಕ್ಷ ಸಿ.ಎಸ್. ಧನಂಜಯ್ ಶುಕ್ಲಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಅಕ್ಟೋಬರ್ ನಲ್ಲಿ ಬೆಂಗಳೂರು ವಿವಿ ಜೊತೆ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಇಂದು ಕುಲಸಚಿವರಾದ ಶೇಕ್ ಲತೀಫ್, ವಿವಿ ಡೀನ್ ಗಳ ಜೊತೆ ಶೈಕ್ಷಣಿಕವಾಗಿ ಪರಸ್ಪರ ಸಹಕಾರ, ಪಠ್ಯವನ್ನು ಮೇಲ್ದರ್ಜೆಗೇರಿಸುವ, ಕೈಗಾರಿಕಾ ಪಾಲುದಾರಿಕೆ ಹೊಂದುವ ಕುರಿತಂತೆ ವಿಸ್ತೃತ ಫಲಪ್ರದ ಮಾತುಕತೆ ನಡೆಸಲಾಗಿದೆ. ಇದರಿಂದ ಬೆಂಗಳೂರು ವಿವಿ ವ್ಯಾಪ್ತಿಯ 298 ಕಾಲೇಜುಗಳು ಮತ್ತು ಐಸಿಎಸ್ಐಗೆ ಅನುಕೂಲವಾಗಲಿದೆ. ಪಾಲುದಾರಿಕೆಯ ಸ್ವರೂಪದ ಬಗ್ಗೆ ಸಮಾಲೋಚಿಸಿದ್ದು, ಶೈಕ್ಷಣಿಕ ವಲಯದಲ್ಲಿ ಹೊಸ ಆಯಾಮಕ್ಕೆ ಇದೀಗ ವೇದಿಕೆ ಸಜ್ಜಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಒಟ್ಟು 12,170 ಮಂದಿ ವಿದ್ಯಾರ್ಥಿಗಳು ಕಂಪೆನಿ ಸೆಕ್ರೇಟರಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿದ್ದು, ಬೆಂಗಳೂರಿನ ಭಾರತೀಯ ಆಡಳಿತ ಮಂಡಳಿ – ಐಐಎಂ, ಕ್ರೈಸ್ಟ್ ವಿವಿ ಜೊತೆಯೂ ಐಸಿಎಸ್ಐ ಸಹಭಾಗಿತ್ವ ಹೊಂದಿದೆ. ಸಿಎಸ್ಆರ್ ಚಟುವಟಿಕೆಯಡಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ಹುತಾತ್ಮರಾದ ಸೈನಿಕರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದು, 2017 ರಿಂದ ಇದಕ್ಕಾಗಿ 41 ಲಕ್ಷ ರೂಪಾಯಿ ನಿಧಿ ಸಂಗ್ರಹಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ವಿಶೇಷ ಚೇತನರಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಸಿಎಸ್ ಕೋರ್ಸ್ ಗಳಿಗೆ ವ್ಯಾಪಕ ಬೇಡಿಕೆ ಇದ್ದು, ಬರುವ 2030 ರ ವೇಳೆಗೆ 30 ಸಾವಿರ ಹೆಚ್ಚುವರಿ ಹುದ್ದೆಗಳು ಸೃಜನೆಯಾಗಲಿವೆ. ವಿಜ್ಞಾನ ಒಲಿಂಪಿಯಾಡ್ ಪ್ರತಿಷ್ಠಾನದೊಂದಿಗೆ ಐಸಿಎಸ್ಐ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದೆ ಎಂದು ಸಿ.ಎಸ್. ಧನಂಜಯ್ ಶುಕ್ಲಾ ಹೇಳಿದರು.

ಐಸಿಎಸ್ಐ ಉಪಾಧ್ಯಕ್ಷ ಪವನ್ ಜಿ ಚಂದಕ್ ಮಾತನಾಡಿ, ಕಾರ್ಫೋರೆಟ್ ಜಗತ್ತಿಗೆ ಸಂವಹನ ಕೌಶಲ್ಯ ಅಗತ್ಯವಾಗಿದ್ದು, ಯೋಚಿಸಿ ಮಾತನಾಡುವ ಕುಶಲತೆಯನ್ನು ವೃದ್ಧಿಸಲು “ಸಮಾಜದೊಂದಿಗೆ ಚರ್ಚೆ” ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ. ಸಾಮಾಜಿಕ ಆಡಳಿತ ಲೆಕ್ಕ ಪರಿಶೋಧನೆ, ಇ – ಕಲಿಕೆಯಲ್ಲಿ ಕ್ರಾಂತಿಕಾರ ಕ್ರಮಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರೀಯ ಮಂಡಳಿ ಸದಸ್ಯರಾದ ಸಿ. ದ್ವಾರಕಾನಾಥ್ ಮಾನತಾಡಿ, ಸಿಎಸ್ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರು 24 ತಿಂಗಳು ಕಠಿಣ ತರಬೇತಿ ಪಡೆಯಬೇಕಾಗುತ್ತದೆ. ಇದರಿಂದ ಪ್ರಾಯೋಗಿಕವಾಗಿ ಕೆಲಸದ ಅನುಭವ ಪಡೆಯಲು ಸಹಕಾರಿಯಾಗಲಿದೆ. ತರಬೇತಿ ಪಡೆಯುವವರಿಗೆ ಗರಿಷ್ಠ 10 ಸಾವಿರ ರೂಪಾಯಿ ಶಿಷ್ಯ ವೇತನ ನೀಡಲಾಗುತ್ತದೆ ಎಂದು ಹೇಳಿದರು.

ಎಸ್ಐಆರ್ ಸಿ ಮಾಜಿ ಅಧ್ಯಕ್ಷರಾದ ಪ್ರದೀಪ್ ಬಿ ಕುಲಕರ್ಣಿ ಮಾತನಾಡಿ, ಕಂಪೆನಿ ಸೆಕ್ರೇಟರೀಸ್ ಕೋರ್ಸ್ ಗಳಿಗೆ ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಪ್ರಾಧಿಕಾರ ಮತ್ತು ಸೆಬಿ ಕೂಡ ಮಾನ್ಯತೆ ನೀಡಿದ್ದು, ಕಾರ್ಪೋರೇಟ್ ವಲಯದಲ್ಲಿ ಈ ಕೋರ್ಸ್ ಗಳು ಹೊಸ ಸ್ವರೂಪ ಪಡೆದುಕೊಂಡಿವೆ. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಮೂರು ಮಂದಿ ಅಗ್ರ ಶ್ರೇಯಾಂಕದಲ್ಲಿ ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಸಿಎಸ್ ಕೋರ್ಸ್ ಗಳಿಂದ ಹಲವು ಪ್ರಯೋಜನ, ಉದ್ಯೋಗ ಸೃಷ್ಟಿ

ಐಸಿಎಸ್ಐ ಬೆಂಗಳೂರು ಚಾಪ್ಟರ್ ಅಧ್ಯಕ್ಷರಾದ ಸಿ.ಎಸ್. ದೇವಿಕಾ ಸತ್ಯನಾರಾಯಣ್ ಮಾತನಾಡಿ, ಐಸಿಎಸ್ಐ ಜೊತೆ ಬೆಂಗಳೂರು ವಿವಿ ಒಪ್ಪಂದ ಮಾಡಿಕೊಂಡಿರುವುದರಿಂದ ಶೈಕ್ಷಣಿಕ ಚಟುವಟಿಕೆಗೆ ಜಾಗತಿಕ ಮನ್ನಣೆ ದೊರೆಯಲಿದೆ. ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಇದು ಬುನಾದಿಯಾಗಲಿದೆ,  ವಿದ್ಯಾರ್ಥಿಗಳು ಇಂತಹ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ಪಿಯುಸಿ ನಂತರ ಹಾಗೂ ಡಿಗ್ರಿ ಆದವರು ಕೋರ್ಸ್ ಗಳಿಗೆೆ ಸೇರಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಿ ಎಸ್ ಕೋರ್ಸ್ ಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಿದ್ದೆ ಆದರೆ ವಿಫಲವಾದ ಅಂತಹ ಅವಕಾಶಗಳು ಇವೆ, ಅದರ ಜೊತೆಜೊತೆಗೆ ಉದ್ಯೋಗವು ಸಹ ಸಿಗುತ್ತವೆ.

ಪತ್ರಿಕಾಗೋಷ್ಠಿಯಲ್ಲಿ ಸಿಎಸ್ಐ ಬೆಂಗಳೂರು ಚಾಪ್ಟರ್ ಕಾರ್ಯದರ್ಶಿ ಸಿಎಸ್ ಪ್ರಸನ್ನ ಬೇಡಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ