ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆತ್ಮೀಯರಾದ ಬಿ.ಕೆ.ಹರಿಪ್ರಸಾದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸೈದ್ಧಾಂತಿಕ ಬದ್ಧತೆ, ದೀರ್ಘಕಾಲದ ರಾಜಕೀಯ ಅನುಭವ, ಪಕ್ಷ ನಿಷ್ಠೆ ಮತ್ತು ಹೋರಾಟದ ಬದುಕು ರಾಜ್ಯ ಕಾಂಗ್ರೆಸ್ ಪಕ್ಷವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲಿದೆ ಎಂಬ ವಿಶ್ವಾಸವಿದೆ.
ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮತ್ತು ಪ್ರಜಾಪ್ರಭುತ್ವ ವಿರೋಧಿಗಳ ವಿರುದ್ಧ ರಾಜ್ಯದ ಜನರನ್ನು ಜಾಗೃತಗೊಳಿಸುವ ತಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.
ಇಲ್ಲಿಯ ವರೆಗೆ ಅತ್ಯಂತ ಸಮರ್ಥವಾಗಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ಡಿ.ಕೆ.ಶಿವಕುಮಾರ್ ಅವರ ಕಾರ್ಯವೂ ಶ್ಲಾಘನೀಯವಾದುದ್ದು. ಅವರಿಗೂ ನನ್ನ ಅಭಿನಂದನೆಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.