LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಕಾಮಗಾರಿಗಳ ಸುರಕ್ಷತಾ ಕ್ರಮಗಳೊಂದಿಗೆ, ಸಂಚಾರಕ್ಕೆ ತೊಂದರೆಯಾಗದಂತೆ ಕೈಗೊಳ್ಳಿ – ಜಗದೀಶ್.ಜಿ

ಬೆಂಗಳೂರು: ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾನ್ಯ ಆಯುಕ್ತರಾದ ಶ್ರೀ ಜಗದೀಶ್.ಜಿ ರವರು ನಿನ್ನೆ ರಾತ್ರಿ ವೇಳೆಯಲ್ಲಿ ನಗರ ಪ್ರದಕ್ಷಿಣೆ ನಡೆಸಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.news_1795287152_3_422.webp

ಈ ಸಂದರ್ಭದಲ್ಲಿ ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ, ಸ್ವಚ್ಛತೆ, ಹಸಿರೀಕರಣ ಹಾಗೂ ಬೀದಿ ದೀಪಗಳ ನಿರ್ವಹಣೆಯನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

*ಟ್ರಿನಿಟಿ ವೃತ್ತದ ಬಳಿ ಪಾದಚಾರಿ ಮಾರ್ಗದ ದುರಸ್ತಿಗೆ ಸೂಚನೆ*

ಟ್ರಿನಿಟಿ ವೃತ್ತದ ಬಳಿ ಪರಿಶೀಲನೆ ನಡೆಸಿದ ಆಯುಕ್ತರು, ಪಾದಚಾರಿ ಮಾರ್ಗದಲ್ಲಿ ಸಂಗ್ರಹವಾಗಿರುವ ಚರಂಡಿ ಹೂಳಿನ ತ್ಯಾಜ್ಯವನ್ನು ತೆರವುಗೊಳಿಸುವುದು ಹಾಗೂ ಅಸ್ತವ್ಯಸ್ತವಾಗಿರುವ ವಿದ್ಯುತ್ ಮತ್ತು ಇತರೆ ಕೇಬಲ್‌ಗಳನ್ನು ಸಮರ್ಪಕವಾಗಿ ಅಳವಡಿಸುವಂತೆ ಸೂಚಿಸಿ, ಅಪಾಯಕಾರಿಯಾಗಿ ಚಾಚಿಕೊಂಡಿರುವ ಮರದ ಕೊಂಬೆಗಳನ್ನು ತೆರವುಗೊಳಿಸಿ, ಮರಗಳ ಸುತ್ತಲೂ ಸೂಕ್ತ ಟ್ರೀ ಪಿಟ್‌ ಗಳನ್ನು ನಿರ್ಮಿಸುವುದು, ಒತ್ತುವರಿ ಮಾಡಿಕೊಂಡಿರುವ ಅಂಗಡಿಗಳನ್ನು ತೆರವುಗೊಳಿಸುವುದು ಹಾಗೂ ಹಾನಿಗೊಳಗಾದ ಪಾದಚಾರಿ ಮಾರ್ಗವನ್ನು ತ್ವರಿತವಾಗಿ ದುರಸ್ತಿಗೊಳಿಸುವಂತೆ ಸೂಚಿಸಿದರು.

*ಭಾಸ್ಕರನ್ ರಸ್ತೆಯಲ್ಲಿ ಕುಸಿದ ವೈಟ್ ಟಾಪಿಂಗ್ ರಸ್ತೆ ದುರಸ್ತಿಗೆ ಕ್ರಮ*

ಭಾಸ್ಕರನ್ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಈ ಹಿಂದೆ ರಸ್ತೆ ಮೂಲಸೌಕರ್ಯ ಇಲಾಖೆಯಿಂದ ನಿರ್ಮಿಸಲಾಗಿದ್ದ ವೈಟ್ ಟಾಪಿಂಗ್ ರಸ್ತೆಯ ಬದಿಯಲ್ಲಿ ಕುಸಿತ ಉಂಟಾಗಿರುವುದನ್ನು ಆಯುಕ್ತರು ಗಮನಿಸಿದರು. ಈ ಹಿನ್ನೆಲೆಯಲ್ಲಿ ಬಿ-ಸ್ಮೈಲ್ (B-SMILE) ಸಂಸ್ಥೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ, ಕುಸಿದಿರುವ ಭಾಗವನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ನಿರ್ದೇಶನ ನೀಡಿದರು.

*ಅನಗತ್ಯ ವಿದ್ಯುತ್ ಕಂಬಗಳು ಹಾಗೂ ಅಡೆತಡೆಗಳ ತೆರವು*news_1795287152_2_365.webp

ನಂತರ ಹಳೇ ಮದ್ರಾಸ್ ರಸ್ತೆಯಲ್ಲಿ ಸಂಚರಿಸಿದ ವೇಳೆ ಪಾದಚಾರಿ ಮಾರ್ಗವನ್ನು ಗಮನಿಸಿದ ಅವರು ಮಾತನಾಡಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಬಳಕೆಯಲ್ಲಿಲ್ಲದ ಹಳೆಯ ವಿದ್ಯುತ್ ಕಂಬಗಳು, ಅನಧಿಕೃತ ಜಾಹೀರಾತು ಕಂಬಗಳು ಹಾಗೂ ಅನಗತ್ಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. 
ಪಾದಚಾರಿ ಮಾರ್ಗಗಳಲ್ಲಿರುವ ಅನಗತ್ಯ ಅಡೆತಡೆಗಳು ಹಾಗೂ ಒತ್ತುವರಿಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ತಿಳಿಸಲಾಯಿತು.

*ಲೈಫ್‌ ಸ್ಟೈಲ್ ವೃತ್ತದಿಂದ ರಿಚ್ಮಂಡ್ ರಸ್ತೆಯವರೆಗೆ ಸ್ವಚ್ಛತೆ ಹಾಗೂ ಹಸಿರೀಕರಣಕ್ಕೆ ಆದ್ಯತೆ*

ಲೈಫ್‌ ಸ್ಟೈಲ್ ವೃತ್ತದಿಂದ ರಿಚ್ಮಂಡ್ ರಸ್ತೆವರೆಗೆ ಪರಿಶೀಲನೆ ನಡೆಸಿ ಪಾದಚಾರಿ ಮಾರ್ಗದಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವ ಅಂಗಡಿಗಳು ಹಾಗೂ ಸಂಬಂಧ ಪಟ್ಟವರ ವಿರುದ್ಧ ದಂಡ ವಿಧಿಸಿ, ತ್ಯಾಜ್ಯವನ್ನು ತೆರವುಗೊಳಿಸಲು ಸೂಚಿಸಿದರು. ಪಾದಚಾರಿ ಮಾರ್ಗದಲ್ಲಿರುವ ತಳ್ಳುವ ಗಾಡಿಗಳನ್ನು ತೆರವುಗೊಳಿಸುವುದರ ಜೊತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳು ಹಾಗೂ ಪಕ್ಷಿಗಳಿಗೆ ಆಹಾರ ನೀಡುವುದರಿಂದ ಉಂಟಾಗುವ ಸ್ವಚ್ಛತಾ ಸಮಸ್ಯೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಸ್ತೆ ಬದಿಯ ಗಿಡಮರಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಅನಗತ್ಯವಾಗಿ ಬೆಳೆದಿರುವ ಹಾಗೂ ಅಪಾಯಕಾರಿಯಾಗಿ ಚಾಚಿಕೊಂಡಿರುವ ಕೊಂಬೆಗಳನ್ನು ಕತ್ತರಿಸಿ ತೆರವುಗೊಳಿಸಬೇಕು. ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಕತ್ತರಿಸಿದ ಮರದ ಕೊಂಬೆಗಳನ್ನು ತಕ್ಷಣ ತೆರವುಗೊಳಿಸುವುದರ ಜೊತೆಗೆ, ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ದುರಸ್ತಿಗೊಳಿಸಿ, ಅಗತ್ಯವಿರುವ ಸ್ಥಳಗಳಲ್ಲಿ ಹೊಸ ಬೀದಿ ದೀಪಗಳನ್ನು ಅಳವಡಿಸುವಂತೆ ಸೂಚಿಸಿದರು.

*ವೈಟ್ ಟಾಪಿಂಗ್ ಹಾಗೂ ಡಾಂಬರೀಕರಣ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ*news_1795287152_1_771.webp

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಪ್ರಗತಿಯಲ್ಲಿರುವ ವೈಟ್ ಟಾಪಿಂಗ್ ಹಾಗೂ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಪರಿಶೀಲಿಸಿದ ಆಯುಕ್ತರು, ನಿಗದಿತ ತಾಂತ್ರಿಕ ಮಾನದಂಡಗಳಂತೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ಕಾಮಗಾರಿಗಳ ಪ್ರತಿಯೊಂದು ಹಂತದಲ್ಲೂ ಗುಣಮಟ್ಟದ ಮೇಲೆ ನಿಗಾ ವಹಿಸುವುದು ಹಾಗೂ ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡದಿರುವಂತೆ ಸಂಬಂಧಪಟ್ಟ ಅಭಿಯಂತರರಿಗೆ ಸೂಚಿಸಿದರು.

*ಕಾಮಗಾರಿ ಸ್ಥಳಗಳಲ್ಲಿ ಸುರಕ್ಷತೆ ಹಾಗೂ ಸಂಚಾರ ನಿರ್ವಹಣೆಗೆ ಆದ್ಯತೆ*

ರಸ್ತೆ ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್, ಎಚ್ಚರಿಕೆ ಫಲಕ ಹಾಗೂ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಅಳವಡಿಸಬೇಕು. ಸಾಧ್ಯವಾದಷ್ಟು ಕಡಿಮೆ ಸಂಚಾರ ದಟ್ಟಣೆ ಉಂಟಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಯೋಜಿಸಿ, ತ್ವರಿತವಾಗಿ ಪೂರ್ಣಗೊಳಿಸುವಂತೆ ಆಯುಕ್ತರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾ ಚಲಪತಿ.ಆರ್, ಜಂಟಿ ಆಯುಕ್ತರುಗಳಾದ ಶ್ರೀ ಹೇಮಂತ್ ಶರಣ್ ಹಾಗೂ ಶ್ರೀಮತಿ ಸಪ್ತಶ್ರೀ, ಮುಖ್ಯ ಅಭಿಯಂತರರಾದ ಶ್ರೀ ವಿಜಯ್ ಕುಮಾರ್, ಹರಿದಾಸ್, ಅಧೀಕ್ಷಕ ಅಭಿಯಂತರರಾದ ಶ್ರೀ ಚಂದ್ರಶೇಖರ್, ಆರೋಗ್ಯಾಧಿಕಾರಿಗಳಾದ ಶ್ರೀ ಶಿವಕುಮಾರ್, ಡಿಜಿಎಂ ಶ್ರೀ ಭೀಮೇಶ್ ನಾಯಕ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರು, ಆರೋಗ್ಯ ವೈದ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾಷಣ ಮಾಡೋಲ್ಲ, ಜನರ ಅಹವಾಲು ಆಲಿಸೋಣ ಎಂದ ಸಚಿವ ಮಧು ಬಂಗಾರಪ್ಪಸೊರಬ ಕ್ಷೇತ್ರದಲ್ಲಿ 2 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆರಸ್ತೆ ಕಾಮಗಾರಿಗಳ ಸುರಕ್ಷತಾ ಕ್ರಮಗಳೊಂದಿಗೆ, ಸಂಚಾರಕ್ಕೆ ತೊಂದರೆಯಾಗದಂತೆ ಕೈಗೊಳ್ಳಿ – ಜಗದೀಶ್.ಜಿವಿಧಾನಸೌಧ ಮುಂಭಾಗ ಜೆಟ್ ಸ್ಪ್ರೇ ವಾಹನದ ಪ್ರಾತ್ಯಕ್ಷಿಕೆ ಪರಿಶೀಲನೆ ಕಿದ್ವಾಯಿ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆಯೊಂದಿಗೆ ಹಂಸಜ್ಯೋತಿ ಟ್ರಸ್ಟ್‌ನಿಂದ 71ನೇ ಕನ್ನಡ ನಾಡ ಹಬ್ಬದ ಆಚರಣೆಬಸವ ಮಂಟಪ ಕೃತಿ ವಿವಾದ: ಲೇಖಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ವಿಭೂತಿ ಮಠದ ಶ್ರೀಗಳಿಂದ ಸ್ಪಷ್ಟನೆಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ ನಿರ್ಮಾಣ : ಕೃಷ್ಣ ಬೈರೇಗೌಡKSCA ಅಧ್ಯಕ್ಷರಿಂದ ಅಧಿಕಾರ ದುರ್ಬಳಕೆ ಆರೋಪ ಮಾಜಿ ಅಧ್ಯಕ್ಷ ಜಗನ್ನಾಥ್ ದಾಖಲೆ ಬಿಡುಗಡೆMES ನಲ್ಲಿ 71ನೇ ಕನ್ನಡ ರಾಜ್ಯೋತ್ಸವ, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆಭಾನುವಾರ ಬ್ರಾಹ್ಮಣ ಮಂಡಳಿಯಿಂದ 132 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ