LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನುಡಿದಂತೆ ನಡೆಯಿರಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ಚಾಮರಾಜನಗರ: ಎರಡು ಪ್ರಬಲ ಸಮುದಾಯಗಳ ಒತ್ತಡದಿಂದ ಜಾತಿಗಣತಿ ವರದಿಯನ್ನು ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೇಟು ಹಾಕುತ್ತಿದ್ದಾರೆ. ಈ ಮೂಲಕ 250ಕ್ಕೂ ಹೆಚ್ಚು ಜಾತಿಯವರಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಜಾತಿಯಲ್ಲಿ ಎಷ್ಟು ಜನಸಂಖ್ಯೆ ಇದ್ದಾರೆ ಎಂಬುದು ನಮಗೆ ತಿಳಿಯದಿದ್ದರೆ ನಮ್ಮ ಸಮುದಾಯಕ್ಕೆ ಸಿಗುತ್ತಿರುವ ಮೀಸಲಾತಿಯನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ? ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಚಂದ್ರು ಅವರು ಭಾನುವಾರ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದರು. ಈ ಸಂದರ್ಭ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯದವರು ಎಲ್ಲರೂ ಜಾತಿಗಣತಿ ವರದಿಯನ್ನು ಬಿಡುಗಡೆಗೊಳಿಸುವಂತೆ ಹೋರಾಟ ಮಾಡಬೇಕು. ಸಿದ್ದರಾಮಯ್ಯ ಅವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರವೆಲ್ಲಿ ಬಿದ್ದುಹೋಗುತ್ತದೋ ಎಂಬ ಭಯದಿಂದ ವರದಿಯನ್ನು ಸ್ವೀಕರಿಸಲಿಲ್ಲ. ಈ ಬಾರಿ ಚುನಾವಣೆ ಪೂರ್ವದಲ್ಲೇ ಜಾತಿಗಣತಿ ವರದಿ ಸ್ವೀಕರಿಸುವುದಾಗಿ ಹೇಳಿದ್ದಾರೆ. ನುಡಿದಂತೆ ನಡೆಯುವ ಸರ್ಕಾರ ಎಂದು ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸುವ ಮೂಲಕ ತಮ್ಮ ಮಾತಿನಂತೆ ನಡೆಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಅವರು ಸಿದ್ದರಾಮಯ್ಯ ಅವರಿಗೆ ಸವಾಲು ಒಡ್ಡಿದರು.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಸಂದಿರುವ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಾಸಕರಿಗೆ ಕನ್ನಡದಲ್ಲೇ ಸಹಿ ಹಾಕಬೇಕು ಎನ್ನುತ್ತಿದ್ದಾರೆ. ಕನ್ನಡ ಅಸ್ಮಿತೆ ಬಗ್ಗೆ ಭಾಷಣ ಮಾಡುತ್ತಾರೆ. ಆದರೆ ಇದೆಲ್ಲವೂ ಬಾಯಿಯಲ್ಲಿ ಮಾತ್ರ, ಕೃತಿಯಲ್ಲಿ ಇಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅನ್ಯಾಯವಾಗಿದೆ. ಅನುದಾನ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, ಮಂಜೂರಾದ ಹಣ ಇದುವರೆಗೆ ಬಿಡುಗಡೆಯಾಗಿಲ್ಲ. ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲ. ರಂಗಾಯಣವನ್ನು ಕಡೆಗಣಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಭಾಗವಾಗಿ 1-2 ಸ್ಥಾನದ ಬೇಡಿಕೆ ಇಡುತ್ತೇವೆಕೂ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸುವುದಕ್ಕಾಗಿ ರಾಷ್ಟ್ರಮಟ್ಟದ 'ಇಂಡಿಯಾ' ಮೈತ್ರಿಕೂಟದ ಸದಸ್ಯರಾಗಿದ್ದೇವೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೈತ್ರಿ ಭಾಗವಾಗಿ 1-2 ಸ್ಥಾನವನ್ನು ಎಎಪಿಗೆ ಬಿಟ್ಟುಕೊಡುವಂತೆ ಬೇಡಿಕೆ ಮುಂದಿಡುತ್ತೇವೆ. ಸ್ಥಳೀಯ ಚುನಾವಣೆಗಳಲ್ಲಿ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಕಳೆದ 75 ವರ್ಷಗಳಿಂದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರಗಳಿಂದ ಜನರು ಬೇಸತ್ತಿದ್ದಾರೆ. ಕಳೆದ 5 ವರ್ಷಗಳ ದುರಾಡಳಿತ, ಭ್ರಷ್ಟಾಚಾರದಿಂದ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ. ಜೆಡಿಎಸ್‌ನ ವಂಶರಾಜಕಾರಣದಿಂದ ಬೇಸತ್ತು, ಅನಿವಾರ್ಯವಾಗಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷವು ತನ್ನ ಪರ ಜನತೆಯಿದೆ ಎಂದುಕೊಂಡರೆ ಅದು ಮೂರ್ಖತನ ಎಂದರು.

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅರವಿಂದ ಕೇಜ್ರಿವಾಲ್‌ ಅವರ ದೆಹಲಿ ಸರ್ಕಾರ ಮಾದರಿ ಸರ್ಕಾರವಾಗಿದೆ. ಕಳೆದ 8 ವರ್ಷಗಳಿಂದ ಅಲ್ಲಿನ ನಾಗರಿಕರಿಗೆ ಗುಣಮಟ್ಟದ ಮೂಲಭೂತ ಸೌಲಭ್ಯಗಳು ಸಿಗುತ್ತಿವೆ. ಶಿಕ್ಷಣ, ಚಿಕಿತ್ಸೆ, ಪ್ರಯಾಣ ಎಲ್ಲವೂ ಉಚಿತವಿದ್ದು, ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಬಡವರು, ಮಧ್ಯವರ್ಗದವರು ಸಂತೋಷವಾಗಿದ್ದಾರೆ. ಕೇಜ್ರಿವಾಲ್‌ ಮಾದರಿಯ ಆಡಳಿತ ನಮ್ಮ ರಾಜ್ಯದಲ್ಲೂ ಬರಬೇಕು. ಅದಕ್ಕಾಗಿ ಎಎಪಿ ಸ್ಥಳೀಯ ಮಟ್ಟದಲ್ಲಿ ಪ್ರಬಲಗೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಉತ್ಸುಕರಾಗಿ ಕೆಲಸ ಮಾಡಬೇಕು. ಮಾತಲ್ಲಿ ಅರಮನೆ ಕಟ್ಟುವ ಡೋಂಗಿ ರಾಜಕಾರಣಿಗಳನ್ನು ನಂಬಬಾರದು ಎಂದು ಕರೆ ಕೊಟ್ಟರು.

ಈ ವೇಳೆ ರಾಜ್ಯ ಕಾರ್ಯದರ್ಶಿ ಸೋಸ್ಲೆ ಸಿದ್ಧರಾಜು, ಜಿಲ್ಲಾಧ್ಯಕ್ಷ ಹರೀಶ್‌, ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್‌, ಸಂಘಟನಾ ಕಾರ್ಯದರ್ಶಿ ಮಹದೇವ ಸ್ವಾಮಿ ಮತ್ತಿತರರು ಹಾಜರಿದ್ದರು.

ಹಳ್ಳಿಕಟ್ಟೆ ಸಂವಾದದಲ್ಲಿ ಹಲವು ಸಮಸ್ಯೆ ಬಯಲಿಗೆ

ಇನ್ನು ಇದೇ ವೇಳೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಪಾಳ್ಯ ಗ್ರಾಮದಲ್ಲಿ ಪಕ್ಷದ ಅರಳಿಕಟ್ಟೆ ಸಂವಾದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗ್ರಾಮಸ್ಥರು ತಮ್ಮ ಹಲವಾರು ಸಮಸ್ಯೆಗಳನ್ನು ಹೇಳಿಕೊಂಡು ಮುಕ್ತವಾಗಿ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ,ಟಿ. ನಾಗಣ್ಣ, ಉಪಾಧ್ಯಕ್ಷ ನಂಜಪ್ಪ ಕಾಳೇಗೌಡ, ಹಾಗೂ ಸ್ಥಳೀಯ ಮುಖಂಡರುಗಳಾದ ಹರೀಶ್ ಸೇರಿದಂತೆ ನೂರಾರು ಗ್ರಾಮಸ್ಥರು, ಗ್ರಾಮದ ಮುಖಂಡರುಗಳು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ